
ಜೊಹಾನ್ಸ್'ಬರ್ಗ್(ಫೆ.03): ಗಾಯದ ಸಮಸ್ಯೆಯಿಂದ ಭಾರತ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದ ಹೊರಬಿದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಫ್ ಡು ಫ್ಲೆಸಿಸ್ ಅವರ ಅನುಪಸ್ಥಿತಿಯಲ್ಲಿ 23 ವರ್ಷದ ಯುವ ಕ್ರಿಕೆಟಿಗ ಏಡನ್ ಮಾರ್ಕ್'ರಮ್ ತಂಡವನ್ನು ಮುನ್ನಡೆಸಲಿದ್ದಾರೆ.
2019ರ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಮಾರ್ಕ್'ರಮ್ ಅವರನ್ನು ನಾಯಕನನ್ನಾಗಿ ನೇಮಿಸಿದೆ ಎನ್ನಲಾಗಿದೆ. ಏಡನ್ ಮಾರ್ಕ್'ರಮ್ ದಕ್ಷಿಣ ಆಫ್ರಿಕಾ ಪರ ಕೇವಲ 2 ಏಕದಿನ ಪಂದ್ಯಗಳನ್ನಷ್ಟೇ ಆಡಿದ್ದಾರೆ. ಆದರೆ 2014ರ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಿದ್ದ ಮಾರ್ಕ್'ರಮ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.
ಇದಷ್ಟೇ ಅಲ್ಲದೇ ಪ್ರಥಮ ದರ್ಜೆ ಕ್ರಿಕೆಟ್'ನಲ್ಲಿ ಟೈಟಾನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಅನುಭವವಿರುವ ಮಾರ್ಕ್'ರಮ್, ಕಳೆದ ಸೆಪ್ಟೆಂಬರ್-ಅಕ್ಟೋಬರ್'ನಲ್ಲಿ ನಡೆದ ಟೂರ್ನಿಯಲ್ಲಿ 119, 87, 67, 85 ಹಾಗೂ ಅಜೇಯ 81 ರನ್ ಬಾರಿಸುವ ಮೂಲಕ ಗಮನ ಸೆಳೆದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.