
ದುಬೈ(ಮೇ.28]: ಪಿಚ್, ಸ್ಪಾಟ್ ಫಿಕ್ಸಿಂಗ್ ಕುರಿತು ರಹಸ್ಯ ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಸೃಷ್ಟಿಸಿರುವ ಅಲ್ ಜಜೀರಾ ಸುದ್ದಿ ವಾಹಿನಿ ತನಿಖೆಗೆ ಸ್ಪಂದಿಸುತ್ತಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ತಿಳಿಸಿದೆ.
ಭಾರತ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ಟೆಸ್ಟ್ ಪಂದ್ಯಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಹಸ್ಯ ಕಾರ್ಯಾಚರಣೆಯಲ್ಲಿ ಹೇಳಲಾಗಿದೆ. ‘ನಾವು ಸುದ್ದಿ ವಾಹಿನಿಯನ್ನು ನಿರಂತರವಾಗಿ ಸಂಪರ್ಕಿಸುತ್ತಿದ್ದೇವೆ. ಹಲವು ಬಾರಿ ಮನವಿ ಮಾಡಿದರೂ ಸಾಕ್ಷ್ಯಾಧಾರಗಳನ್ನು ಹಸ್ತಾಂತರಿಸಲು ಅಲ್ ಜಜೀರಾ ಒಪ್ಪುತ್ತಿಲ್ಲ. ಇದರಿಂದ ನಮ್ಮ ತನಿಖೆಗೆ ತೊಂದರೆಯಾಗಿದೆ’ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
‘ರಹಸ್ಯ ಕಾರ್ಯಾಚರಣೆಯಲ್ಲಿ ದಾಖಲಾಗಿರುವ ಮಾಹಿತಿ ಸಹಜವಾಗಿಯೇ ತನಿಖೆಗೆ ಮಹತ್ವದೆನಿಸಿದೆ. ಆದರೆ ವಾಹಿನಿಗೆ ಅದು ಅರ್ಥವಾಗುತ್ತಿಲ್ಲ. ನಮ್ಮೊಂದಿಗೆ ಸಹಕರಿಸುತ್ತಿಲ್ಲ’ ಎಂದು ಐಸಿಸಿ ಬೇಸರ ವ್ಯಕ್ತಪಡಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.