ಇಂಜುರಿಯಿಂದ ವಿಶ್ರಾಂತಿಯಲ್ಲಿದ್ದ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ರಣಜಿ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಮುಂಬೈ ವಿರುದ್ದದ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
ಮುಂಬೈ(ಡಿ.15): ಇಂಜುರಿಯಿಂದ ಚೇತರಿಸಿಕೊಂಡು ರಣಜಿ ಪಂದ್ಯದಲ್ಲಿ ಕಣಕ್ಕಿಳಿದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಹಾರ್ದಿಕ್ ಪಾಂಡ್ಯ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಶೀಘ್ರದಲ್ಲೇ ಟೀಂ ಇಂಡಿಯಾ ಸೇರಿಕೊಳ್ಳೋ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಮತ್ತೆ ಕಳಪೆ ಪ್ರದರ್ಶನ- ಕೆಎಲ್ ರಾಹುಲ್ ವಿರುದ್ದ ಟ್ವಿಟರಿಗರ ಆಕ್ರೋಶ!
ಮುಂಬೈ ವಿರುದ್ಧ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಬರೋಡಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 5 ವಿಕೆಟ್ ಕಬಳಿಸಿದ್ದಾರೆ. ಮುಂಬೈ ಆರಂಭಿಕ ಬ್ಯಾಟ್ಸ್‌ಮನ್ ಆದಿತ್ಯ ತಾರೆ ಸೇರಿದಂತೆ ಐವರು ಪ್ರಮುಖ ಬ್ಯಾಟ್ಸ್‌ಮನ್‌ಗಳ ವಿಕೆಟ್ ಕಬಳಿಸಿದ ಪಾಂಡ್ಯ ಬರೋಡಾ ತಂಡಕ್ಕೆ ಭರ್ಜರಿ ಮೇಲುಗೈ ತಂದುಕೊಟ್ಟಿದ್ದಾರೆ.
ಇದನ್ನೂ ಓದಿ: ರವೀಂದ್ರ ಜಡೇಜಾ ಕೈ ಬಿಟ್ಟ ಕೊಹ್ಲಿ ನಿರ್ಧಾರಕ್ಕೆ ಟ್ವಿಟರಿಗರ ಆಕ್ರೋಶ!
ಏಷ್ಯಾಕಪ್ ಟೂರ್ನಿಯಲ್ಲಿ ಇಂಜುರಿಗೆ ತುತ್ತಾದ ಹಾರ್ದಿಕ್ ಪಾಂಡ್ಯ ವಿಶ್ರಾಂತಿಗೆ ಜಾರಿದ್ದರು. ಬರೋಬ್ಬರಿ 2 ತಿಂಗಳ ಬಳಿಕ ಮತ್ತೆ ಮೈದಾನದಲ್ಲಿ ಕಾಣಿಸಿಕೊಂಡ ಹಾರ್ದಿಕ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದೀಗ ಹಾರ್ದಿಕ್ ಪಾಂಡ್ಯ ಪ್ರದರ್ಶನದಿಂದ ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗುವ ಎಲ್ಲಾ ಸಾಧ್ಯತೆ ಇದೆ.
ಇದನ್ನೂ ಓದಿ: ರವಿ ಶಾಸ್ತ್ರಿ ಹಾಗೂ ಕೊಹ್ಲಿಗಾಗಿ ನಿಯಮ ಉಲ್ಲಂಘಿಸಿದ ಬಿಸಿಸಿಐ!