'1983 ವಿಶ್ವಕಪ್' ಬಾಲಿವುಡ್ ಚಿತ್ರದಲ್ಲಿ ಅಲ್ಲು ಅರ್ಜುನ್!

Published : Sep 09, 2018, 03:23 PM ISTUpdated : Sep 09, 2018, 09:17 PM IST
'1983 ವಿಶ್ವಕಪ್' ಬಾಲಿವುಡ್ ಚಿತ್ರದಲ್ಲಿ ಅಲ್ಲು ಅರ್ಜುನ್!

ಸಾರಾಂಶ

ಕಪಿಲ್ ದೇವ್ ನೇೃತ್ವದ ಟೀಂ ಇಂಡಿಯಾ 1983ರಲ್ಲಿ ವಿಶ್ವಕಪ್ ಗೆದ್ದು ಇತಿಹಾಸ ರಚಿಸಿತ್ತು. ಇದೀಗ ಕಪಿಲ್ ಪಾತ್ರದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಣಿಸಿಕೊಳ್ಳುತ್ತಿದ್ದರೆ, ತೆಲುಗು ನಟ ಅಲ್ಲು ಅರ್ಜುನ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಮುಂಬೈ(ಸೆ.09): ಬಾಲಿವುಡ್‌ನಲ್ಲಿ ಕ್ರೀಡಾ ಸಾಧಕರ ಆತ್ಮಚರಿತ್ರೆಗಳು ಹೆಚ್ಚು ಯಶಸ್ಸು ಕಾಣುತ್ತಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾದ 1983ರ ವಿಶ್ವಕಪ್ ಗೆಲುವಿನ ಕುರಿತು ಬಾಲಿವುಡ್ ಚಿತ್ರ ಸೆಟ್ಟೇರಿ ಹಲವು ದಿನಗಳೇ ಉರುಳಿದೆ.

1983ರಲ್ಲಿ ಕಪಿಲ್ ದೇವ್ ನಾಯಕತ್ವದವ ಟೀಂ ಇಂಡಿಯಾ ಚೊಚ್ಚಲ ಬಾರಿಗೆ ವಿಶ್ವಕಪ್ ಪ್ರಶಸ್ತಿ ಗೆದ್ದು ದಾಖಲೆ ಬರೆದಿತ್ತು. ಈ ಎಲ್ಲಾ ಅಂಶಗಳನ್ನೊಳಗೊಂಡ 1983ರ ವಿಶ್ವಕಪ್ ಚಿತ್ರವನ್ನ ಬಾಲಿವುಡ್ ಖ್ಯಾತ ನಿರ್ದೇಶಕ ಕಬೀರ್ ಖಾನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಕಪಿಎಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಈಗಾಗಲೇ ಹಲವು ಸೀನ್‌ಗಳ  ಶೂಟಿಂಗ್ ಮುಗಿಸಿದ್ದಾರೆ. ಇದೀಗ 1983ರ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಕಷ್ಣಮಾಚಾರಿ ಶ್ರೀಕಾಂತ್ ಪಾತ್ರದಲ್ಲಿ ತೆಲುಗು ನಟ ಅಲ್ಲು ಅರ್ಜುನ್ ಕಾಣಿಸಿಕೊಳ್ಳಲಿದ್ದಾರೆ.

ವಿಶ್ವಕಪ್ 1983 ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸೋ ಮೂಲಕ ತೆಲುಗು ಸ್ಟಾರ್ ಅಲ್ಲು ಅರ್ಜುನ್ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ಸದ್ಯ ಚಿತ್ರ ತಂಡ ಪ್ರೀ ಪ್ರೊಡಕ್ಷನ್ ಕಾರ್ಯದಲ್ಲಿ ಬ್ಯುಸಿಯಾಗಿದೆ. ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್‌ ಮುಗಿಸಿ ಚಿತ್ರ ತೆರೆಗೆ ಬರಲು ಕನಿಷ್ಟ ಒಂದು ವರ್ಷವಾದರು ಬೇಕು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!
U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!