
ಮುಂಬೈ[ಜೂ.10]: ‘ವಿರುಷ್ಕಾ’ ಎಂದೇ ಜನಪ್ರಿಯಗೊಂಡಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬಗ್ಗೆ ಹಿಂದಿಯ ಜನಪ್ರಿಯ ಟೀವಿ ಕಾರ್ಯಕ್ರಮ ಕೌನ್ ಬನೇಗಾ ಕರೋಡ್‌ಪತಿಯಲ್ಲೂ ಪ್ರಶ್ನೆ ಕೇಳಲಾಗಿದೆ.
ವಿರುಷ್ಕಾ ಮದುವೆ ನಡೆದಿದ್ದು ಯಾವ ದೇಶದಲ್ಲಿ ಎನ್ನುವ ಪ್ರಶ್ನೆಯನ್ನು ವೀಕ್ಷಕರಿಗೆ ಕೇಳಿದ್ದು ಅಭಿಮಾನಿಗಳ ಗಮನ ಸೆಳೆದಿದೆ. ಕಾರ್ಯಕ್ರಮದ ಮುಖ್ಯ ಸಂಚಿಕೆಗಳು ಸದ್ಯದಲ್ಲೇ ಆರಂಭಗೊಳ್ಳಲಿದ್ದು, ಈಗ ನೋಂದಣಿ ಕಾರ್ಯ ನಡೆಯುತ್ತಿದೆ.
ಪ್ರತಿ ದಿನ ಒಂದೊಂದು ಪ್ರಶ್ನೆ ಕೇಳಲಾಗುತ್ತಿದ್ದು, ಎಲ್ಲಾ ಪ್ರಶ್ನೆಗಳಿಗೂ ಸರಿಯಾದ ಉತ್ತರ ಕೊಟ್ಟವರನ್ನು ಕಾರ್ಯಕ್ರಮದ ಮುಂದಿನ ಆಯ್ಕೆ ಪ್ರಕ್ರಿಯೆಗೆ ಕರೆಯಲಾಗುತ್ತದೆ ಎನ್ನಲಾಗಿದೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.