
ಲಾಡರ್‌ಹಿಲ್ (ಅಮೆರಿಕ)ಆ.04: ಮೊಣಕಾಲಿನ ಗಾಯದ ನೆಪವೊಡ್ಡಿ ಭಾರತ ವಿರುದ್ಧ ಟಿ20 ಸರಣಿಯ ಮೊದಲೆರಡು ಪಂದ್ಯಗಳಿಗೆ ಗೈರಾಗಿರುವ ವಿಂಡೀಸ್ ಆಲ್ರೌಂಡರ್ ಆ್ಯಂಡ್ರೆ ರಸೆಲ್, ಕೆನಡಾದಲ್ಲಿ ನಡೆಯುತ್ತಿರುವ ಗ್ಲೋಬಲ್ ಟಿ20 ಟೂರ್ನಿಯಲ್ಲಿ ಆಡುವ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದಾರೆ.
ಇದನ್ನೂ ಓದಿ: INDvWI: ಬೌಲರ್‌ಗಳ ಪರಾಕ್ರಮ; ವಿಂಡೀಸ್ ವಿರುದ್ಧ ಭಾರತಕ್ಕೆ ಗೆಲುವು!
ಏಕದಿನ ವಿಶ್ವಕಪ್ ವೇಳೆ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದ ರಸೆಲ್, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಗುಣಮುಖರಾಗಿದ್ದಾರೆ ಎನ್ನುವ ವರದಿಯನ್ನು ಆಧಾರಿಸಿ ವಿಂಡೀಸ್ ಕ್ರಿಕೆಟ್ ಮಂಡಳಿ ಅವರಿಗೆ ಟಿ20 ತಂಡದಲ್ಲಿ ಸ್ಥಾನ ನೀಡಿತ್ತು. ಗಾಯದ ನೆಪ ಹೇಳಿ ಮತ್ತೊಂದು ಟಿ20 ಲೀಗ್‌ನಲ್ಲಿ ಹಣಕ್ಕಾಗಿ ಆಡುತ್ತಿದ್ದಾರೆ ಎನ್ನುವ ಆರೋಪ ರಸೆಲ್ ವಿರುದ್ಧ ಕೇಳಿಬಂದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.