
ಲಂಡನ್(ಜು.03): ಹಾಲಿ ಚಾಂಪಿಯನ್ ಬ್ರಿಟನ್'ನ ಆ್ಯಂಡಿ ಮರ್ರೆ ವಿಂಬಲ್ಡನ್ ಗ್ರ್ಯಾಂಡ್ ಸ್ಲಾಂ ಟೆನಿಸ್ ಪಂದ್ಯಾವಳಿಯಲ್ಲಿ ಭರ್ಜರಿ ಶುಭಾರಂಭ ಮಾಡಿದ್ದಾರೆ. ಮೊದಲ ಸುತ್ತಿನ ಪಂದ್ಯದಲ್ಲಿ ಖಜಕಸ್ತಾನದ ಅಲೆಕ್ಸಾಂಡರ್ ಬುಬ್ಲಿಕ್ ವಿರುದ್ಧ 6-1, 6-4, 6-2 ನೇರ ಸೆಟ್'ಗಳಲ್ಲಿ ಗೆಲುವು ಸಾಧಿಸಿದರು.
ಪಂದ್ಯದ ಅರಂಭದಿಂದಲೂ ಆಕ್ರಮಣಕಾರಿ ಆಟವಾಡಿದ ನಂ. ಶ್ರೇಯಾಂಕಿತ ಆಟಗಾರ ಮರ್ರೆ, ಖಜಕಸ್ತಾನದ ಆಟಗಾರನಿಗೆ ಯಾವ ಸಂದರ್ಭದಲ್ಲೂ ಪ್ರಭುತ್ವ ಮೆರೆಯಲು ಅವಕಾಶ ಮಾಡಿಕೊಡಲಿಲ್ಲ. ಇನ್ನು ದ್ವಿತೀಯ ಸುತ್ತಿನಲ್ಲಿ ಬ್ರಿಟನ್ ಆಟಗಾರ, ಜರ್ಮನಿಯ ಡಸ್ಟಿನ್ ಬ್ರೌನ್ ಅವರನ್ನು ಎದುರಿಸಲಿದ್ದಾರೆ.
ಮತ್ತೊಂದು ಪಂದ್ಯದಲ್ಲಿ 9ನೇ ಶ್ರೇಯಾಂಕಿತ ಆಟಗಾರ ಕೇ ನಿಶಿಕೋರಿ ಮೊದಲ ಸುತ್ತಿನಲ್ಲಿ ಇಟಲಿಯ ಮಾರ್ಕೊ ಚೆಚಿನಾಟೊ ವಿರುದ್ಧ 6-2, 6-2, 6-0 ನೇರ ಸೆಟ್'ಗಳಲ್ಲಿ ಜಯಗಳಿಸಿ 2ನೇ ಸುತ್ತಿಗೇರಿದರು.
ವೀನಸ್'ಗೆ ಜಯದೋಟ: ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ 5 ಬಾರಿ ವಿಂಬಲ್ಡನ್ ಚಾಂಪಿಯನ್ ಅಮೆರಿಕದ ವೀಸನ್ ವಿಲಿಯಮ್ಸ್, ಮೊದಲ ಸುತ್ತಿನಲ್ಲಿ ಗೆಲುವು ಪಡೆಯುವಲ್ಲಿ ಸಫಲರಾಗಿದ್ದಾರೆ. 20ನೇ ಬಾರಿಗೆ ವಿಂಬಲ್ಡನ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿರುವ ವೀನಸ್, ಜರ್ಮನಿಯ ಎಲಿಸಿ ಮರ್ಟೆನ್ಸ್ ವಿರುದ್ಧ 7-6(9/7), 6-4 ನೇರ ಸೆಟ್'ಗಳಲ್ಲಿ ಜಯಗಳಿಸಿದರು.
ಇದೇ ವೇಳೆ ದ್ವಿತೀಯ ಶ್ರೇಯಾಂಕಿತೆ ರೊಮೇನಿಯಾದ ಸಿಮೊನಾ ಹಾಲೆಪ್ ಹಾಗೂ 4ನೇ ಶ್ರೇಯಾಂಕಿತೆ ಉಕ್ರೇನ್'ನ ಎಲೆನಾ ಸ್ವಿಟೊಲಿನಾ ಸಹ ದ್ವಿತೀಯ ಸುತ್ತಿಗೇರಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.