
ನವದೆಹಲಿ(ಜು.13): ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಸುಪ್ರೀಂ ಕೋರ್ಟ್‌ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ.
ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಎ.ಎಂ.ಖಾನ್‌ವಿಲ್ಕರ್, ಡಿ.ವೈ.ಚಂದ್ರಾಚೂಡ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಈ ಹಿಂದೆ ಅನುರಾಗ್ ಸಲ್ಲಿಸಿದ್ದ ಕ್ಷಮಾಪಣಾ ಅಫಿಡೇವಿಟ್ ಅನ್ನು ತಿರಸ್ಕರಿ ಜು.14ರಂದು ಖುದ್ದು ಹಾಜರಾಗಿ ಕ್ಷಮಾಪಣೆ ಕೋರುವಂತೆ ಆದೇಶಿಸಿತ್ತು. ಮತ್ತೊಮ್ಮೆ ಚಿಕ್ಕದಾದ ಕ್ಷಮಾಪಣಾ ಅಫಿಡೆವಿಟ್ ಸಲ್ಲಿಸುವಂತೆಯೂ ಸೂಚಿಸಿತ್ತು. ಸುಪ್ರೀಂಕೋರ್ಟ್‌ಗೆ ತಪ್ಪು ಮಾಹಿತಿ ನೀಡದ ಕಾರಣಕ್ಕಾಗಿ ಅನುರಾಗ್ ವಿರುದ್ಧ ಕಳೆದ ವರ್ಷ ನ್ಯಾಯಾಂಗ ನಿಂದನೆ ಆರೋಪ ದಾಖಲಿಸಲಾಗಿತ್ತು.
ಬಿಸಿಸಿಐ ಸ್ವಾಯತ್ತತೆಯ ಕುರಿತಂತೆ ಐಸಿಸಿಗೆ ಅನುರಾಗ್ ಠಾಕೂರ್ ಸಲ್ಲಿಸಿರುವ ಸುಳ್ಳು ಅಫಿಡೇವಿಟ್'ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕಳೆದ ಜನವರಿ 2ರಂದು ಅವರ ವಿರುದ್ಧ ನ್ಯಾಯಾಂಗ ನಿಂದನೆ ಕುರಿತು ವಿಚಾರಣೆ ಆರಂಭಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.