ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರಾಟ್ ಕೊಹ್ಲಿ : ಇಟಲಿಯಲ್ಲಿ ಕೆಲವೇ ಕುಟುಂಬಸ್ಥರೊಂದಿಗೆ ನಡೆದ ವಿವಾಹ

Published : Dec 11, 2017, 07:30 PM ISTUpdated : Apr 11, 2018, 12:59 PM IST
ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿರಾಟ್ ಕೊಹ್ಲಿ : ಇಟಲಿಯಲ್ಲಿ ಕೆಲವೇ ಕುಟುಂಬಸ್ಥರೊಂದಿಗೆ ನಡೆದ ವಿವಾಹ

ಸಾರಾಂಶ

ಡಿ.22 ರಂದು ಮುಂಬೈನಲ್ಲಿ ನಡೆಯುವ ಅದ್ಧೂರಿ ಅರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್, ಕ್ರಿಕೆಟಿಗರು ಸೇರಿದಂತೆ ಹಲವು ದಿಗ್ಗಜರು ಪಾಲ್ಗೊಳ್ಳಲಿದ್ದಾರೆ.

ರೋಮ್(ಡಿ.11): ಭಾರತ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ ಕೋಟ್ಯಂತರ ಅಭಿಮಾನಿಗಳಿಗೆ ಸಂತಸದ ಸುದ್ದಿ. ಸ್ಫೋಟಕ ಆಟಗಾರ, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ(29) ಬೆಂಗಳೂರು ಮೂಲದ  ಬಾಲಿವುಡ್ ನಟಿ ಅನುಷ್ಕಾ ಶರ್ಮಾ(29) ಅವರನ್ನು ವರಿಸಿದ್ದಾರೆ.

ಇಟಲಿಯ ಮಿಲನ್ ನಗರದಲ್ಲಿ ಕೆಲವೇ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಇಂದು ನಡೆದ ಮದುವೆಯಲ್ಲಿ ಕೊಹ್ಲಿ  ಅನುಷ್ಕ ಶರ್ಮಾ'ರನ್ನು ವಿವಾಹವಾಗಿದ್ದಾರೆ. ಶುಭ ಸಮಾರಂಭದಲ್ಲಿ ಕೊಹ್ಲಿ,ಅನುಷ್ಕ ಶರ್ಮಾ ಅವರ ಕುಟುಂಬದ ಸದಸ್ಯರು ಹಾಗೂ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಶಾರೂಕ್ ಖಾನ್, ಅಮೀರ್ ಖಾನ್, ಕರಣ್ ಜೋಹರ್,ಕತ್ರೀನಾ ಕೈಫ್ ಮಾತ್ರವೇ ಹಾಜರಿದ್ದರು.

ಡಿ.22 ರಂದು ಮುಂಬೈನಲ್ಲಿ ನಡೆಯುವ ಅದ್ಧೂರಿ ಅರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್, ಕ್ರಿಕೆಟಿಗರು ಸೇರಿದಂತೆ ಹಲವು ದಿಗ್ಗಜರು ಪಾಲ್ಗೊಳ್ಳಲಿದ್ದಾರೆ. ವಿವಾಹವಾಗುವ ಕಾರಣದಿಂದಲೇ ವಿರಾಟ್ ಕೊಹ್ಲಿ ಅವರು ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದರು.

ಟ್ವಿಟರ್'ನಲ್ಲಿ ದೃಢಪಡಿಸಿದ ದಂಪತಿಗಳು

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಟ್ವಿಟರ್'ನಲ್ಲಿ ತಮ್ಮ ಮದುವೆ ಫೋಟೊ'ಗಳನ್ನು ಟ್ವೀಟಿಸುವುದರ ಮೂಲಕ ತಾವು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇವೆ ಎಂಬುದನ್ನು ದೃಢಪಡಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: ಮಿನಿ ಹರಾಜಿಗೆ ಒಂದು ದಿನ ಬಾಕಿ ಇರುವಾಗ ಕೊನೆ ಕ್ಷಣದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ 'ವೈಲ್ಡ್ ಕಾರ್ಡ್' ಎಂಟ್ರಿ!
ಮುಂಬೈನಲ್ಲಿ ಮೆಸ್ಸಿ ಮೇನಿಯಾ! ಫುಟ್ಬಾಲ್‌ ಲೆಜೆಂಡ್‌ಗೆ 2011ರ ವಿಶ್ವಕಪ್ ಜೆರ್ಸಿ ಕೊಟ್ಟ ಸಚಿನ್