
ಪ್ರೇಮಿಗಳಾದ ಕ್ರಿಕೆಟಿಗ ವಿರಾಟ್ ಕೊಹ್ಲಿ , ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನ್ಯೂ ಇಯರ್ ಪಾರ್ಟಿಯನ್ನು ಭಾರತದಲ್ಲೇ ಆಚರಿಸಲಿದ್ದಾರೆಂದು ಮೂಲಗಳು ಹೇಳಿವೆ.
ಡೆಹ್ರಾಡೂನ್'ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದಲ್ಲಿ ಈ ಇಬ್ಬರೂ ಶನಿವಾರ ಒಟ್ಟಿಗೇ ಕಾಣಿಸಿಕೊಂಡಿರುವ ಫೋಟೋಗಳು ಕೆಲ ಅಂತರ್ಜಾಲ ಮಾಧ್ಯಮಗಳಲ್ಲಿ ಹರಿದಾಡಿವೆ.
ಅಲ್ಲಿಂದ ಈ ಇಬ್ಬರೂ ಉತ್ತರಾಖಾಂಡ್'ನಲ್ಲಿರುವ ನರೇಂದ್ರ ನಗರ್'ನಲ್ಲಿನ ಆನಂದ ರೆಸಾರ್ಟ್‌ಗೆ ತೆರಳಿದ್ದು ಅಲ್ಲಿಯೇ ನ್ಯೂ ಇಯರ್ ಪಾರ್ಟಿಯಲ್ಲಿ ಪಾಲ್ಗೊಳ್ಳಲಿದ್ದಾರೆನ್ನಲಾಗಿದೆ.
ಒಟ್ಟಾರೆ ಆಂಗ್ಲರ ವಿರುದ್ಧ ಟೆಸ್ಟ್ ಸರಣಿ ಗೆದ್ದ ನಂತರ ನಾಯಕ ವಿರಾಟ್ ಕೊಹ್ಲಿ ಇದೀಗ ಫುಲ್ ಜಾಲಿಮೂಡ್'ನಲ್ಲಿದ್ದಂತೆ ಕಾಣುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.