
ನವದೆಹಲಿ(ಡಿ.24): ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ತಾವು ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ ಎಂದು ಮತ್ತೊಮ್ಮೆ ಬಹಿರಂಗವಾಗಿ ಘೋಷಿಸಿದ್ದಾರೆ.
ಇತ್ತೀಚೆಗಷ್ಟೇ ತಮ್ಮ ಚಿತ್ರ ‘ಝೀರೋ’ ಪ್ರಚಾರದ ವೇಳೆ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿದ್ದಾಗ, ‘ನೀವು ಯಾವ ಕ್ರೀಡಾಪಟುವಿನ ಜೀವನ ಚರಿತ್ರೆಯಲ್ಲಿ ಕಾಣಿಸಿಕೊಳ್ಳಲು ಇಚ್ಛಿಸುತ್ತೀರಾ’ ಎಂದು ಕೇಳಿದ ಪ್ರಶ್ನೆಗೆ ಶಾರುಖ್ ‘ವಿರಾಟ್’ ಎಂದು ಉತ್ತರ ನೀಡಿದರು.
ನಗುತ್ತಲೇ ಪ್ರತಿಕ್ರಿಯಿಸಿದ ಅನುಷ್ಕಾ, ‘ಕೊಹ್ಲಿ ಪಾತ್ರ ಮಾಡಲು ನೀವು ಗಡ್ಡ ಬಿಡಬೇಕು’ ಎಂದಾಗ ಶಾರುಖ್, ‘ಹ್ಯಾರಿ ಮೆಟ್ ಸೇಜಲ್ ಚಿತ್ರದಲ್ಲಿ ನಾನು ಗಡ್ಡ ಬಿಟ್ಟಿದ್ದೆ. ಥೇಟ್ ಕೊಹ್ಲಿಯಂತೆಯೇ ಕಾಣುತ್ತಿದೆ’ ಎಂದರು.
ಈಗಾಗಲೇ ಕ್ರಿಕೆಟಿಗರಾದ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಸಚಿನ್ ತೆಂಡುಲ್ಕರ್ ಜೀವನ ಚರಿತ್ರೆಯ ಚಿತ್ರಗಳ ತೆರೆಕಂಡಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.