
ಮುಂಬೈ(ಜೂ.2): ಐಪಿಎಲ್ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ಕಳೆದ 6 ವರ್ಷಗಳಿಂದ ತಾವು ಬೆಟ್ಟಿಂಗ್ ನಲ್ಲಿ ಭಾಗಿಯಾಗಿರುವುದಾಗಿ ಅರ್ಬಾಜ್ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.
ಥಾಣೆಯ ಪೊಲೀಸ್ ಠಾಣೆಗೆ ಇಂದು ವಿಚಾರಣೆಗೆ ಹಾಜರಾದ ಅರ್ಬಾಜ್, ಕಳೆದ ೬ ವರ್ಷಗಳಿಂದ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದು, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತನ ಜೊತೆ ಸಂಪರ್ಕ ಇತ್ತೆಂಬ ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ.
"
ಈ 6 ವರ್ಷಗಳ ಅವಧಿಯಲ್ಲಿ ತಾವು 3 ಕೋಟಿ ರೂ. ಕಳೆದುಕೊಂಡಿರುವುದಾಗಿಯೂ ಅರ್ಬಾಜ್ ಹೇಳಿದ್ದಾರೆ. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಬೆಸ್ತು ಬಿದ್ದ ಅವರು, ಕೆಲವೇ ಕ್ಷಣಗಳಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು ಥಾಣೆ ಪೊಲೀಸರು ಅರ್ಬಾಜ್ ಖಾನ್ ಅವರ ಮೇಲೆ ಪ್ರಶ್ನೆಗಳ ಸುರಿಮಳೆಗೈದಿದ್ದರು. ಐಪಿಎಲ್ ನಲ್ಲಿ ಯಾವ ತಂಡದ ಪರ ಬೆಟ್ಟಿಂಗ್ ಮಾಡುತ್ತಿದ್ದರು?. ಎಷ್ಟು ಹಣ ಕಟ್ಟಲಾಗಿತ್ತು?. ಬುಕ್ಕಿ ಸೋನಮ್ ಜೊತೆಗಿನ ಸಂಪರ್ಕದ ಕುರಿತು ಪೊಲೀಸರು ಪ್ರಶ್ನೆ ಕೇಳಿ ಅರ್ಬಾಜ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.