ಟೀಕೆಗಳಿಗೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಖಡಕ್ ಉತ್ತರ

Published : Jul 18, 2018, 12:30 PM IST
ಟೀಕೆಗಳಿಗೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಖಡಕ್ ಉತ್ತರ

ಸಾರಾಂಶ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಭಾರತ ಅಂಡರ್ 19 ತಂಡಕ್ಕೆ ಆಯ್ಕೆಯಾದಾಗ ಟೀಕೆ ವ್ಯಕ್ತವಾಗಿತ್ತು. ಸಚಿನ್ ಪುತ್ರ ಅನ್ನೋ ಕಾರಣಕ್ಕೆ ಅರ್ಜುನ್‌ಗೆ ಅವಕಾಶ ನೀಡಲಾಗಿದೆ ಅನ್ನೋ ಮಾತು ಕೇಳಿಬಂದಿತ್ತು. ಇದೀಗ ಟೀಕೆಗಳಿಗೆ ಅರ್ಜುನ್ ತೆಂಡೂಲ್ಕರ್ ಉತ್ತರಿಸಿದ್ದಾರೆ.

ಕೊಲಂಬೋ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್, ಭಾರತ ಅಂಡರ್-19 ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಮಂಗಳವಾರ ಇಲ್ಲಿ ಆರಂಭಗೊಂಡ ಶ್ರೀಲಂಕಾ ವಿರುದ್ಧದ 4 ದಿನಗಳ ಟೆಸ್ಟ್ ಪಂದ್ಯದಲ್ಲಿ ಅರ್ಜುನ್ ಆಕರ್ಷಕ ಬೌಲಿಂಗ್ ಪ್ರದರ್ಶನ ತೋರಿದರು. 

ಮೊದಲ ಇನ್ನಿಂಗ್ಸ್‌ನಲ್ಲಿ ಲಂಕಾದ ಕಮಿಲ್ ಮಿಶಾರಾರನ್ನು ತಮ್ಮ ಸ್ಪೆಲ್‌ನ 12ನೇ ಎಸೆತದಲ್ಲೇ ಎಲ್‌ಬಿ ಬಲೆಗೆ ಕೆಡವಿದ ಅರ್ಜುನ್, ಭಾರತ ಕಿರಿಯರ ತಂಡದ ಪರ ಚೊಚ್ಚಲ ವಿಕೆಟ್ ಕಬಳಿಸಿದ ಸಂಭ್ರಮ ಅಚರಿಸಿದರು.

 

 

 ಅರ್ಜುನ್‌ಗೆ ಭಾರತ ಅಂಡರ್-19 ತಂಡದಲ್ಲಿ ಸ್ಥಾನ ನೀಡಿದ್ದಕ್ಕಾಗಿ ಕೆಲವರು ಟೀಕೆ ಮಾಡಿದ್ದರು. ಇದೀಗ ಅರ್ಜುನ್ ತೆಂಡೂಲ್ಕರ್ ವಿಕೆಟ್ ಕಬಳಿಸೋ ಮೂಲಕ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

3 ಗಂಟೆ ಕಾದರೂ ಕರಗದ ಮಂಜು, ಭಾರತ ಸೌತ್ ಆಫ್ರಿಕಾ 4ನೇ ಟಿ20 ಪಂದ್ಯ ರದ್ದು
Ind vs SA: ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್! ಗಿಲ್ ಔಟ್, ಯಾರಿಗೆ ಸಿಗತ್ತೆ ಚಾನ್ಸ್?