
ಕೊಲಂಬೊ[ಅ.29]: ವ್ಯಕ್ತಿಯೋರ್ವನ ಹತ್ಯೆ ಮಾಡಿದ ಆರೋಪದಡಿ ಶ್ರೀಲಂಕಾ ಮಾಜಿ ನಾಯಕ, ಪೆಟ್ರೋಲಿಯಂ ಸಚಿವ ಅರ್ಜುನ್ ರಣತುಂಗಾ ಅವರನ್ನು ಬಂಧಿಸಲಾಗಿದೆ.
ಶ್ರೀಲಂಕಾದಲ್ಲಿ ರಾಜಕೀಯ ಅರಾಜಕತೆ ಮುಂದುವರೆದಿದ್ದು, ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ಅರ್ಜುನ್ ರಣತುಂಗಾ ಅವರ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಲಾಗಿದೆ. ಈ ಕುರಿತಂತೆ ಕ್ಷಿಪ್ರ ಬೆಳವಣಿಗೆಯಲ್ಲಿ ಮಾಜಿ ಕ್ರಿಕೆಟಿಗ ರಣತುಂಗಾ ಅವರನ್ನು ಬಂಧಿಸಲಾಗಿದೆ.
ಮೃತಪಟ್ಟ ವ್ಯಕ್ತಿಯನ್ನು 34 ವರ್ಷದ ಮೇಲೀ ಎಂದು ಗುರುತಿಸಲಾಗಿದ್ದು, ಗಾಯಾಳುವನ್ನು ಕೊಲಂಬೊದಲ್ಲಿರುವ ರಾಷ್ಟ್ರೀಯ ಆಸ್ಫತ್ರೆಗೆ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅಸುನೀಗಿದ್ದಾನೆ ಎನ್ನಲಾಗಿದೆ.
ಕಳೆದ ಶುಕ್ರವಾರದಿಂದ ದ್ವೀಪರಾಷ್ಟ್ರದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದ್ದು, ಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಕೆಳಗಿಳಿಸಿ ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಷೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಬಳಿಕ ಹಿಂಸಾಚಾರ ಭುಗಿಲೆದ್ದಿದೆ.
1996ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅರ್ಜುನ್ ರಣತುಂಗಾ ಶ್ರೀಲಂಕಾ ತಂಡವನ್ನು ಮುನ್ನಡೆಸಿ ಚೊಚ್ಚಲ ವಿಶ್ವಕಪ್ ಗೆದ್ದುಕೊಟ್ಟಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.