ಅರ್ಜೆಂಟೀನಾ ಸೋಲು:  ಮೆಸ್ಸಿಯ ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆಗೆ ಶರಣು

Published : Jul 04, 2018, 09:38 AM IST
ಅರ್ಜೆಂಟೀನಾ ಸೋಲು:  ಮೆಸ್ಸಿಯ ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆಗೆ ಶರಣು

ಸಾರಾಂಶ

ಶನಿವಾರ ನಡೆದ ಪ್ರಿ ಕ್ವಾರ್ಟರ್ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಅರ್ಜೆಂಟೀನಾ 4-3ರಿಂದ ಸೋಲು ಕ್ರೊವೇಷಿಯಾ ವಿರುದ್ಧ ಅರ್ಜೆಂಟೀನಾ ಸೋಲುಂಡಿದ್ದಾಗ ಕೇರಳದಲ್ಲಿ ಮೆಸ್ಸಿ ಅಭಿಮಾನಿ ಆತ್ಮಹತ್ಯೆ

ಕೋಲ್ಕತಾ: ಫುಟ್ಬಾಲ್ ವಿಶ್ವಕಪ್‌ನಿಂದ ಅರ್ಜೆಂಟೀನಾ ತಂಡ ಹೊರ ಬೀಳುತ್ತಿದ್ದಂತೆ, ಲಿಯೊನೆಲ್ ಮೆಸ್ಸಿ ಹಾಗೂ ಅರ್ಜೆಂಟೀನಾ ತಂಡದ ಅಭಿಮಾನಿಯೊಬ್ಬ ಪಶ್ಚಿಮ ಬಂಗಾಳದಲ್ಲಿ ನೇಣಿಗೆ ಶರಣಾಗಿದ್ದಾನೆ. 

ಈ ಮೊದಲು ಕ್ರೊವೇಷಿಯಾ ವಿರುದ್ಧ ಅರ್ಜೆಂಟೀನಾ ಸೋಲುಂಡಿದ್ದಾಗ ಕೇರಳದಲ್ಲಿ ಮೆಸ್ಸಿ ಅಭಿಮಾನಿ ಆತ್ಮಹತ್ಯೆ ಮಾಡಿ ಕೊಂಡಿದ್ದರು. 

ಇದೀಗ ಶನಿವಾರ (ಜೂ.30) ನಡೆದ ಪ್ರಿ ಕ್ವಾರ್ಟರ್ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಅರ್ಜೆಂಟೀನಾ 4-3ರಿಂದ ಸೋಲುಂಡಿತ್ತು. ಪಂದ್ಯ ಮುಗಿಯುತ್ತಿದ್ದಂತೆ ಬೇಸರದಿಂದ ಊಟವೂ ಮಾಡದೇ ಕೋಣೆ ಸೇರಿದ್ದ ಪ.ಬಂಗಾಳದ ಮಾಲ್ಡಾ ಜಿಲ್ಲೆಯ ಮೊನೊಟೋಶ್ ಹಾಲ್ಡರ್ (20), ಭಾನುವಾರ ಕೋಣೆಯ ಬಾಗಿಲು ತೆರೆದಿರಲಿಲ್ಲ. 

ಕೊನೆಗೆ ಅನುಮಾನದಿಂದ ಪೊಲೀಸರ ಸಹಾಯ ಪಡೆದು ಬಾಗಿಲು ತೆರೆದಾಗ ಆತ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮೆಸ್ಸಿ ಅಭಿಮಾನಿಯ ಮೃತದೇಹ ಮೀನಾಚಿಲ್ ನದಿಯಲ್ಲಿ ಪತ್ತೆ..!

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ವಿಡಿಯೋದಿಂದ ಸಾರಾ ತೆಂಡೂಲ್ಕರ್ ಟ್ರೋಲ್, ತಂದೆ ಮದ್ಯ ವಿರೋಧಿ ನಿಲುವು ನೆನಪಿಸಿದ ನೆಟ್ಟಿಗರು
ಗಂಭೀರ ಸ್ಥಿತಿಯಲ್ಲಿ ಕೋಮಾಕ್ಕೆ ಜಾರಿದ ಆಸೀಸ್‌ ದಿಗ್ಗಜ ಕ್ರಿಕೆಟರ್‌ ಡೇಮಿಯನ್‌ ಮಾರ್ಟಿನ್‌, ಅಪ್‌ಡೇಟ್‌ ನೀಡಿದ ಗಿಲ್‌ಕ್ರಿಸ್ಟ್‌!