
ಲಂಡನ್(ಸೆ.12]: ಆ್ಯಷಸ್‌ನಲ್ಲಿ 2-1 ಮುನ್ನಡೆ ಪಡೆದ ಆಸ್ಟ್ರೇಲಿಯಾ ಟ್ರೋಫಿ ತನ್ನಲ್ಲೇ ಉಳಿಸಿಕೊಂಡಿದ್ದು, 18 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆಲ್ಲುವ ಗುರಿ ಹೊಂದಿದೆ.
ಆ್ಯಷಸ್ ಟೆಸ್ಟ್: ಅಂತಿಮ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ!
3ನೇ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಸಾಹಸದಿಂದ ಹೆಡಿಂಗ್ಲೆಯಲ್ಲಿ ಪವಾಡ ಸದೃಶ ರೀತಿಯಲ್ಲಿ ಗೆಲುವು ಪಡೆದಿದ್ದ ಇಂಗ್ಲೆಂಡ್ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ 4ನೇ ಟೆಸ್ಟ್‌ನಲ್ಲಿ ಮತ್ತದೇ ಕಳಪೆ ಪ್ರದರ್ಶನ ನೀಡಿತು. ಆ್ಯಷಸ್ ಗೆಲ್ಲುವ ಅವಕಾಶವನ್ನು ಇಂಗ್ಲೆಂಡ್ ಈಗಾಗಲೇ ಕೈ ಚೆಲ್ಲಿದೆ. ಕನಿಷ್ಠ ಪಕ್ಷ ಕೊನೆ ಟೆಸ್ಟ್ ಗೆದ್ದರೆ ಆತಿಥೇಯರು ಸರಣಿ ಸೋಲುವುದನ್ನು ತಪ್ಪಿಸಬಹುದು.
ಆ್ಯಷಸ್ ಟೆಸ್ಟ್: 5ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ!
ಓವಲ್‌ನಲ್ಲಿ ಆಂಗ್ಲರು ಗೆಲ್ಲಬೇಕಿದ್ದರೆ ಮಾಜಿ ನಾಯಕ ಸ್ಟೀವ್ ಸ್ಮಿತ್ ವಿಕೆಟ್ ನಿರ್ಣಾಯಕ. ಸ್ಮಿತ್ ಆಡಿದ 5 ಇನ್ನಿಂಗ್ಸ್‌ಗಳಲ್ಲಿ 134ಕ್ಕೂ ಹೆಚ್ಚಿನ ಬ್ಯಾಟಿಂಗ್ ಸರಾಸರಿಯಲ್ಲಿ 671 ರನ್ ಕಲೆಹಾಕಿದ್ದಾರೆ. ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಅಂಕ ಪಟ್ಟಿಯಲ್ಲಿ 56 ಅಂಕ ಸಂಪಾದಿಸಿರುವ ಆಸ್ಟ್ರೇಲಿಯಾ 4ನೇ ಹಾಗೂ 32 ಅಂಕ ಸಂಪಾದಿಸಿದ ಇಂಗ್ಲೆಂಡ್ 5ನೇ ಸ್ಥಾನದಲ್ಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.