
ನವದೆಹಲಿ(ಡಿ.29): ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ, ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯಲ್ಲಿ ಹಿರಿಯ ಸ್ಪಿನ್ನರ್'ಗಳಾದ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರ ಮೇಲೆ ತಂಡ ಹೆಚ್ಚಿನ ವಿಶ್ವಾಸವಿಟ್ಟಿದೆ ಎಂದಿದ್ದಾರೆ.
‘ಅಶ್ವಿನ್ ಹಾಗೂ ಜಡೇಜಾಗೆ ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಿ ಪಿಚ್'ಗಳಲ್ಲೂ ಉತ್ತಮ ಪ್ರದರ್ಶನ ತೋರುವ ಸಾಮರ್ಥ್ಯವಿದೆ. ಅವರು ತಮ್ಮ ಬೌಲಿಂಗ್ ಶೈಲಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ. ಬೌಲ್ ಮಾಡುವ ವೇಗವನ್ನು ಬದಲಿಸಬೇಕಿದ್ದು, ಇಬ್ಬರೂ ಸಹ ವಿದೇಶದಲ್ಲಿ ತಂಡಕ್ಕೆ ಯಶಸ್ಸು ತಂದುಕೊಡಲಿದ್ದಾರೆ’ ಎಂದು ರಹಾನೆ ಹೇಳಿದ್ದಾರೆ.
ಇದೇ ವೇಳೆ ಕೋಚ್ ರವಿಶಾಸ್ತ್ರಿ ಹಾಗೂ ನಾಯಕ ವಿರಾಟ್ ಕೊಹ್ಲಿ ಬಗ್ಗೆಯೂ ರಹಾನೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಯಕ ವಿರಾಟ್ ಕೊಹ್ಲಿ ತಂಡ ಕೂಡಿಕೊಂಡಿದ್ದು ಟೀಂ ಇಂಡಿಯಾಗೆ ಇನ್ನಷ್ಟು ಬಲ ಬಂದಂತಾಗಿದೆ ಎಂದು ರಹಾನೆ ಅಭಿಪ್ರಾಯಪಟ್ಟಿದ್ದಾರೆ. ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಜನವರಿ 5ರಿಂದ ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.