ನನ್ನ ಬಳಿ ಹೊಸ ಅಸ್ತ್ರ ಸಿದ್ದವಿದೆ ಎಂದ ಅಶ್ವಿನ್

Published : May 25, 2017, 02:04 PM ISTUpdated : Apr 11, 2018, 12:38 PM IST
ನನ್ನ ಬಳಿ ಹೊಸ ಅಸ್ತ್ರ ಸಿದ್ದವಿದೆ ಎಂದ ಅಶ್ವಿನ್

ಸಾರಾಂಶ

ನನ್ನ ಹೊಸ ಅಸ್ತ್ರವನ್ನು ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶ ನಡುವಿನ ಎರಡು ಅಭ್ಯಾಸದಲ್ಲೇ ಪ್ರಯೋಗ ಮಾಡುತ್ತೇನೆಂದು ಹೇಳಿದ್ದಾರೆ.

ಮುಂಬೈ(ಮೇ.25): ಮುಂದಿನ ತಿಂಗಳಿಂದ ಆರಂಭವಾಗಲಿರುವ 8 ರಾಷ್ಟ್ರಗಳ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಬಳಸುವುದಕ್ಕಾಗಿ ನನ್ನ ಬಳಿ ಹೊಸ ಅಸ್ತ್ರ ಸಿದ್ಧವಾಗಿವೆ ಎಂದು ಆರ್‌. ಅಶ್ವಿನ್‌ ಹೇಳಿದ್ದಾರೆ.

ಸುಮಾರು ಎರಡು ತಿಂಗಳುಗಳ ಬಳಿಕ ಭಾರತದ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಅಶ್ವಿನ್‌ ಆಡುವ ಅವಕಾಶ ಪಡೆದಿದ್ದಾರೆ.

ನನ್ನ ಹೊಸ ಅಸ್ತ್ರವನ್ನು ನ್ಯೂಜಿಲ್ಯಾಂಡ್ ಹಾಗೂ ಬಾಂಗ್ಲಾದೇಶ ನಡುವಿನ ಎರಡು ಅಭ್ಯಾಸದಲ್ಲೇ ಪ್ರಯೋಗ ಮಾಡುತ್ತೇನೆಂದು ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಸಿಯೇಟ್‌ ಟೈರ್ಸ್ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಅಶ್ವಿನ್‌ 'ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಪಾಲ್ಗೋಳ್ಳುತ್ತಿರುವ ಎಲ್ಲಾ ತಂಡಗಳಿಗೂ ಈ ಟೂರ್ನಿ ಮಹತ್ವದ್ದಾಗಿದೆ. ಹೀಗಾಗಿ ಎಲ್ಲಾ ತಂಡಗಳ ಆಟಗಾರರು ಪ್ರಬಲ ಪೈಪೋಟಿ ನೀಡುವ ಉತ್ಸಾಹದಲ್ಲಿದ್ದಾರೆ. ಇತ್ತೀಚೇಗಷ್ಟೇ ಮುಕ್ತಾಯ ಕಂಡ ಐಪಿಎಲ್‌ ಟೂರ್ನಿಯಲ್ಲಿ ಭಾರತದ ಆಟಗಾರರಲ್ಲದೇ ಇತರೆ ದೇಶದ ಕ್ರಿಕೆಟಿಗರು ತಮ್ಮ ಕೌಶಲ್ಯತೆಯನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ ಎಂದು ಅಶ್ವಿನ್‌ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Ind vs SA: ಶುಭ್‌ಮನ್ ಗಿಲ್ ಫುಲ್ ಫಿಟ್; ಈ ಡೇಟ್‌ಗೆ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡೋದು ಫಿಕ್ಸ್!
ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!