
ದುಬೈ(ಸೆ.19): ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ನೀಡಿದ 163 ರನ್ ಟಾರ್ಗೆಟ್ ಪಡೆದಿರುವ ಟೀಂ ಇಂಡಿಯಾ ಗೆಲುವಿನತ್ತ ದಾಪುಗಾಲಿಟ್ಟಿದೆ. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ 86 ರನ್ ಜೊತೆಯಾಟ ನೀಡೋ ಮೂಲಕ ಭಾರತಕ್ಕೆ ಮೇಲುಗೈ ತಂದುಕೊಟ್ಟರು.
ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ 39 ಎಸೆತದಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 52 ರನ್ ಸಿಡಿಸಿ ಔಟಾದರು. ಈ ಮೂಲಕ ರೋಹಿತ್ ತಮ್ಮ ಅತೀ ವೇಗದ ಏಕದಿನ ಅರ್ಧಶತಕ ಸಿಡಿಸಿದರು.
ರೋಹಿತ್ ಶರ್ಮಾ ಬೆನ್ನಲ್ಲೇ ಶಿಖರ್ ಧವನ್ ಪೆವಿಲಿಯನ್ ಸೇರಿದರು. ಧವನ್ 46 ರನ್ ಸಿಡಿಸಿ ಔಟಾದರು. ಸದ್ಯ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 113 ರನ್ ಸಿಡಿಸಿದೆ. ಈ ಮೂಲಕ ಗೆಲುವಿಗೆ ಇನ್ನು 50 ರನ್ ಅವಶ್ಯಕತೆ ಇದೆ.
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ, ಟೀಂ ಇಂಡಿಯಾ ಅದ್ಬುತ ಬೌಲಿಂಗ್ ದಾಳಿಗೆ ತತ್ತರಿಸಿತು. ಹೀಗಾಗಿ ಪಾಕ್ 162 ರನ್‌ಗೆ ಆಲೌಟ್ ಆಯಿತು. ಭಾರತದಪರ ಭುವನೇಶ್ವರ್ ಕುಮಾರ್ ಹಾಗೂ ಕೇದಾರ್ ಜಾಧವ್ ತಲಾ 3 ವಿಕೆಟ್ ಪಡೆದದರು. ಇನ್ನು ಜಸ್‌ಪ್ರೀತ್ ಬುಮ್ರಾ 2 ಹಾಗೂ ಕುಲ್ದೀಪ್ ಯಾದವ್ 1 ವಿಕೆಟ್ ಕಬಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.