ಏಷ್ಯಾಕಪ್ ಫೈನಲ್: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

By Web DeskFirst Published Sep 28, 2018, 4:36 PM IST
Highlights

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಏಷ್ಯಾಕಪ್ ಫೈನಲ್ ಪಂದ್ಯ ಅಭಿಮಾನಿಗಳ ಕುತೂಹಲ ಇಮ್ಮಡಿಗೊಳಿಸಿದೆ. ಪ್ರಶಸ್ತಿ ಹೋರಾಟದ ಪಂದ್ಯದಲ್ಲಿ ಭಾರತ ಟಾಸ್ ಗೆದ್ದುಕೊಂಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ.

ದುಬೈ(ಸೆ.28): ಪ್ರತಿಷ್ಠಿ ಏಷ್ಯಾಕಪ್ ಟೂರ್ನಿ ಅಂತಿಮ ಘಟ್ಟ ತಲುಪಿದೆ. ಪ್ರಶಸ್ತಿಗಾಗಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಹೋರಾಟ ಆರಂಭಗೊಂಡಿದೆ. ಈಗಾಗಲೇ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟೀಂ ಇಂಡಿಯಾದಲ್ಲಿ ಬದಲಾವಣೆ ಮಾಡಲಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ, ಶಿಖರ್ ಧವನ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಯುಜುವೆಂದ್ರ ಚೆಹಾಲ್ ಕಮ್ ಬ್ಯಾಕ್ ಮಾಡಿದ್ದಾರೆ. 

ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ 7  ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. 2016ರ ಏಷ್ಯಾಕಪ್ ಫೈನಲ್ ಪಂದ್ಯದಲ್ಲೂ ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗಿತ್ತು. ಟಿ20 ಏಷ್ಯಾಕಪ್ ಪಂದ್ಯದಲ್ಲಿ ಭಾರತ 8 ವಿಕೆಟ್ ಗೆಲುವು ಸಾಧಿಸಿತ್ತು. ಇದೀಗ ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಬಾಂಗ್ಲಾದೇಶ ಸಜ್ಜಾಗಿದೆ.

click me!