
ದುಬೈ(ಸೆ.22): ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದಲ್ಲಿ ಆಫ್ಘಾನಿಸ್ತಾನ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದ ಪಾಕಿಸ್ತಾನ ಇದೀಗ ಮಹತ್ವದ ಪಂದ್ಯದ ಮೇಲೆ ಕಣ್ಣಿಟ್ಟಿದೆ. ನಾಳೆ(ಸೆ.23) ನಡೆಯಲಿರುವ ಭಾರತ ವಿರುದ್ಧದ ಹೋರಾಟಕ್ಕೆ ಪಾಕಿಸ್ತಾನ ವಿಶೇಷ ತಯಾರಿ ನಡೆಸಿದೆ.
ಲೀಗ್ ಹಂತದಲ್ಲಿ ಭಾರತ ವಿರುದ್ಧ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಹಿನ್ನಡೆ ಅನುಭವಿಸಿದ ಪಾಕಿಸ್ತಾನ ಇದೀಗ ಗೆಲುವಿಗಾಗಿ ಹಾತೊರೆಯುತ್ತಿದೆ. ಇಷ್ಟೇ ಅಲ್ಲ ಲೀಗ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳಲು ಪಾಕ್ ಸಜ್ಜಾಗಿದೆ. ಭಾರತ ವಿರುದ್ಧದ ನಾಳಿನ ಪಂದ್ಯಕ್ಕೆ ಪಾಕಿಸ್ತಾನ ಸಂಭವನೀಯ ತಂಡ ಈ ರೀತಿ ಇದೆ.
ಪಾಕಿಸ್ತಾನ ಸಂಭವನೀಯ ತಂಡ:
ಫಕರ್ ಜಮಾನ್, ಇಮಾಮ್ ಉಲ್ ಹಕ್, ಬಾಬರ್ ಅಜಮ್, ಹ್ಯಾರಿಸ್ ಸೊಹೈಲ್, ಶೋಯಿಬ್ ಮಲ್ಲಿಕ್, ಸರ್ಫರಾಜ್ ಅಹಮ್ಮದ್(ನಾಯಕ), ಆಸಿಫ್ ಆಲಿ, ಶದಬ್ ಖಾನ್, ಹಸನ್ ಆಲಿ, ಉಸ್ಮಾನ್ ಖಾನ್, ಶಾಹೀನ್ ಆಫ್ರಿದಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.