ಪಾಕಿಸ್ತಾನ ವಿರುದ್ಧ ಸಂಡೇ ವಾರ್‌ಗೆ ಸಜ್ಜಾದ ಭಾರತ-ಇಲ್ಲಿದೆ ಪ್ಲೇಯಿಂಗ್ 11

Published : Sep 22, 2018, 07:47 PM IST
ಪಾಕಿಸ್ತಾನ ವಿರುದ್ಧ ಸಂಡೇ ವಾರ್‌ಗೆ ಸಜ್ಜಾದ ಭಾರತ-ಇಲ್ಲಿದೆ ಪ್ಲೇಯಿಂಗ್ 11

ಸಾರಾಂಶ

ಏಷ್ಯಾಕಪ್ ಟೂರ್ನಿಯಲ್ಲಿ ಮತ್ತೆ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗುತ್ತಿದೆ. ಲೀಗ್ ಹಂತದಲ್ಲಿ ಪಾಕ್ ವಿರುದ್ಧ ಗೆಲುವಿನ ಸಂಭ್ರಮ ಆಚರಿಸಿದ  ಟೀಂ ಇಂಡಿಯಾ ಇದೀಗ ಸೂಪರ್ 4 ಹಂತದಲ್ಲೂ ಗೆಲುವಿನ ವಿಶ್ವಾಸದಲ್ಲಿದೆ. ಇಲ್ಲಿದೆ ಟೀಂ ಇಂಡಿಯಾ ಆಡೋ ಹನ್ನೊಂದರ ಬಳಗ.

ದುಬೈ(ಸೆ.22): ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿದ ಟೀಂ ಇಂಡಿಯಾ ಇದೀಗ ಸಂಡೇ ವಾರ್‌ಗೆ ಸಜ್ಜಾಗಿದೆ. ನಾಳೆ(ಸೆ.23) ನಡೆಯಲಿರುವ ಪಾಕಿಸ್ತಾನ ವಿರುದ್ದದ ಮಹತ್ವದ ಪಂದ್ಯಕ್ಕೆ ಟೀಂ ಇಂಡಿಯಾ ಅಂತಿಮ ಕಸರತ್ತು ನಡೆಸುತ್ತಿದೆ.

ಲೀಗ್ ಹಂತದಲ್ಲಿ ಪಾಕಿಸ್ತಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದ ಭಾರತ, ಇದೀಗ ಅದೇ ಪ್ರದರ್ಶನ ಮುಂದುವರಿಸೋ ವಿಶ್ವಾಸದಲ್ಲಿದೆ. ಆದರೆ ಸೋಲಿಗೆ ತಿರುಗೇಟು ನೀಡಲು ಪಾಕಿಸ್ತಾನ ಕೂಡ ತಯಾರಿ ನಡೆಸಿದೆ.

ಹಾಲಿ ಚಾಂಪಿಯನ್ ಭಾರತ, ಪಾಕ್ ವಿರುದ್ಧ ಗೆಲುವು ಸಾಧಿಸಿ ನೇರವಾಗಿ ಫೈನಲ್ ಪ್ರವೇಶವನ್ನ ಖಚಿತಪಡಿಸಿಕೊಳ್ಳೋ ಲೆಕ್ಕಾಚಾರದಲ್ಲಿದೆ. ಇದೀಗ  ಪಾಕಿಸ್ತಾನ ವಿರುದ್ಧದ ಸೂಪರ್ 4 ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ ಇಲ್ಲಿದೆ. 

ಭಾರತದ ಸಂಭಾವ್ಯ ತಂಡ:
ರೋಹಿತ್ ಶರ್ಮಾ(ನಾಯಕ),ಶಿಖರ್ ಧವನ್, ಅಂಬಾಟಿ ರಾಯುಡು, ಎಂ.ಎಸ್ ಧೋನಿ, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಯುಜುವೇಂದ್ರ ಚಹಾಲ್, ಜಸ್‌ಪ್ರೀತ್ ಬುಮ್ರಾ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌