ಏಷ್ಯಾಕಪ್: ಪಾಕಿಸ್ತಾನಕ್ಕೆ ಶಾಕ್ ನೀಡಿದ ಟೀಂ ಇಂಡಿಯಾ

Published : Sep 23, 2018, 06:11 PM IST
ಏಷ್ಯಾಕಪ್: ಪಾಕಿಸ್ತಾನಕ್ಕೆ ಶಾಕ್ ನೀಡಿದ ಟೀಂ ಇಂಡಿಯಾ

ಸಾರಾಂಶ

ಭಾರತ  ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಹೋರಾಟ ಆರಂಭದಲ್ಲೇ ಕುತೂಹಲ ಕೆರಳಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಇಳಿದಿರುವ ಪಾಕಿಸ್ತಾನ ತಂಡ ಬ್ಯಾಟಿಂಗ್ ಹಾಗೂ ಭಾರತದ ಬೌಲಿಂಗ್ ಪ್ರದರ್ಶನದ ಅಪ್‌ಡೇಟ್ಸ್ ಇಲ್ಲಿದೆ.

ದುಬೈ(ಸೆ.23): ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ಪಾಕಿಸ್ತಾನ ಆರಂಭಿಕರ ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಆರಂಭಿಕ ಮೇಲುಗೈ ಸಾಧಿಸಿದೆ.

ಇಮಾಮ್ ಉಲ್ ಹಕ್ 10 ರನ್ ಸಿಡಿಸಿ ಔಟಾದರು. ಆದರೆ 1 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 31 ರನ್ ಸಿಡಿಸಿದ್ದ ಫಕರ್ ಜಮಾನ್, ಕುಲ್ದೀಪ್ ಮೋಡಿಗೆ ಬಲಿಯಾದರು.  ಇನ್ನು 9ರನ್  ಸಿಡಿಸಿದ ಬಾಬರ್ ಅಜಮ್ ರನೌಟ್‌ಗೆ ಬಲಿಯಾದರು. ಸದ್ಯ  ಪಾಕಿಸ್ತಾನ 58ರನ್‌ಗಳಿಗೆ ಪಾಕಿಸ್ತಾನ 3ನೇ ವಿಕೆಟ್ ಕಳೆದುಕೊಂಡಿತು.

 

 

ಇಂದಿನ ಮಹತ್ವದ ಪಂದ್ಯಕ್ಕಾಗಿ ಪಾಕಿಸ್ತಾನ 2 ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಮೊಹಮ್ಮದ್ ಅಮೀರ್ ಹಾಗೂ ಶದಬ್ ಖಾನ್ ಸ್ಥಾನ ಪಡೆದಿದ್ದಾರೆ. ಆದರೆ ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡಿಲ್ಲ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿವೀಸ್ ಸರಣಿ: ಶ್ರೇಯಸ್ ಅಯ್ಯರ್ ಕಮ್‌ಬ್ಯಾಕ್ ಮತ್ತಷ್ಟು ತಡ; ಈ ಆಟಗಾರನಿಗೆ ಚಾನ್ಸ್?
2025ರಲ್ಲಿ ಅತೀ ಹೆಚ್ಚು ಗೂಗಲ್‌ ಹುಡುಕಾಟದಲ್ಲಿ ಇವರೇ ಟಾಪ್! ಕ್ರಿಕೆಟ್ ಲೋಕದ ಅಚ್ಚರಿಯ ಮುಖಗಳಿವು