ಪಾಕಿಸ್ತಾನ ವಿರುದ್ಧ ರೋಹಿತ್-ಧವನ್ ದಾಖಲೆ ಶತಕ-ಗೆಲುವಿನತ್ತ ಭಾರತ!

Published : Sep 23, 2018, 11:42 PM IST
ಪಾಕಿಸ್ತಾನ ವಿರುದ್ಧ ರೋಹಿತ್-ಧವನ್ ದಾಖಲೆ ಶತಕ-ಗೆಲುವಿನತ್ತ ಭಾರತ!

ಸಾರಾಂಶ

ಭಾರತ ಹಾಗೂ ಪಾಕಿಸ್ತಾನ ನಡುವಿನ ಸೂಪರ್ 4 ಹಂತದ ಪಂದ್ಯ ಉಭಯ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿದೆ. 238 ರನ್ ಟಾರ್ಗೆಟ್ ಬೆನ್ನಟ್ಟುತ್ತಿರುವ ಟೀಂ ಇಂಡಿಯಾ ಪ್ರದರ್ಶನ ಹೇಗಿದೆ? ಇಲ್ಲಿದೆ ಪಂದ್ಯದ ಹೈಲೈಟ್ಸ್!

ದುಬೈ(ಸೆ.23): ಪಾಕಿಸ್ತಾನ ವಿರುದ್ಧದ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಟೀಂ ಇಂಡಿಯಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆರಂಭಿಕರ ಅಬ್ಬರದಿಂದ ಟೀಂ ಇಂಡಿಯಾ ದಾಖಲೆಯ ಗೆಲುವಿನತ್ತ ಹೆಜ್ಜೆ ಇಟ್ಟಿದೆ.

ಪಾಕಿಸ್ತಾನ ವಿರುದ್ಧ ಗೆಲುವಿಗೆ 238 ರನ್ ಟಾರ್ಗೆಟ್ ಪಡೆದಿರುವ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ದಾಖಲೆಯ ಜೊತೆಯಾಟ ನೀಡಿದ್ದಾರೆ. ಅಬ್ಬರಿಸಿದ ಶಿಖರ್ ಧವನ್  ಏಕದಿನ ಕ್ರಿಕೆಟ್‌ನಲ್ಲಿ 15ನೇ ಶತಕ ಸಿಡಿಸಿದರು. 

ಇಷ್ಟೇ ಅಲ್ಲ, ಏಷ್ಯಾಕಪ್, ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಎರಡೆರಡು ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಅನ್ನೋ ಹೆಗ್ಗಳಿಕೆಗೂ ಧವನ್ ಪಾತ್ರರಾಗಿದ್ದಾರೆ. ಧವನ್ 114 ರನ್ ಸಿಡಿಸಿ ರನೌಟ್‌ಗೆ ಬಲಿಯಾದರು.

ಧವನ್‌ಗೆ ಉತ್ತಮ ಸಾಥ್ ನೀಡಿದ ರೋಹಿತ್ ಶರ್ಮಾ 94 ರನ್ ಸಿಡಿಸುತ್ತಿದ್ದಂತೆ, ಏಕದಿನ ಕ್ರಿಕೆಟ್‌ನಲ್ಲಿ 7000 ರನ್ ಪೂರೈಸಿದರು. 106 ಎಸೆತದಲ್ಲಿ ರೋಹಿತ್ ಸೆಂಚುರಿ ಪೂರೈಸಿದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ 19 ನೇ ಶತಕ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾದರು. ಸದ್ಯ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 221 ರನ್ ಸಿಡಿಸಿದೆ. ಗೆಲುವಿಗೆ ಇನ್ನು 17 ರನ್‌ಗಳ ಅವಶ್ಯಕತೆ ಇದೆ. 

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗಧಿತ 50 ಓವರ್‌‌ಗಳಲ್ಲಿ 7 ವಿಕೆಟ್ ನಷ್ಟಕಕ್ಕೆ 237 ರನ್ ಪೇರಿಸಿತು. ಶೋಯಿಬ್ ಮಲ್ಲಿಕ್ 78 , ನಾಯಕ ಸರ್ಫರಾಜ್ ಅಹಮ್ಮದ್ 44 ರನ್ ಕಾಣಿಕೆ ನೀಡಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐತಿಹಾಸಿಕ ಕ್ಲೀನ್‌ ಸ್ವೀಪ್: ವಿಶ್ವದಾಖಲೆ ಬರೆದ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ!
ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಯಲ್ಲಿ ಈ ಇಬ್ಬರು ಸ್ಟಾರ್ ಆಟಗಾರರಿಗೆ ರೆಸ್ಟ್‌!