ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಈವರೆಗಿನ ಅತಿ ಹೆಚ್ಚು ಪದಕ ಗಳಿಸಿದ್ದಾರೆ. ಕಳೆದ ಬಾರಿಯ ಏಷ್ಯನ್ ಗೇಮ್ಸ್ ನಲ್ಲಿ 70 ಇದ್ದಂತಹ ಪದಕಗಳ ಸಂಖ್ಯೆ ಈ ಬಾರಿ 107ಕ್ಕೆ ಹೆಚ್ಚಾಗಿದೆ. ಪದಕ ವಿಜೇತರಲ್ಲಿ ಕನ್ನಡಿಗರೂ ಇದ್ದು, ಇದು ರಾಜ್ಯದ ಗೌರವ ಹೆಚ್ಚುವಂತೆ ಮಾಡಿದೆ. ರಾಜ್ಯದ 8 ಮಂದಿ ಕ್ರೀಡಾಪಟುಗಳು ಪದಕ ಪಡೆದಿದ್ದಾರೆ.
ಬೆಂಗಳೂರು(ಅ.19) ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಕ್ರೀಡಾಪಟುಗಳಿಗೆ ಶೇ. 2ರಷ್ಟು ಉದ್ಯೋಗ ಮೀಸಲಾತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳು ಮತ್ತು ತರಬೇತುದಾರರ ಸನ್ಮಾನಿಸಿ ಮಾತನಾಡಿದ ಅವರು, ಸದ್ಯ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಅದೇ ರೀತಿ ಇತರ ಇಲಾಖೆಗಳಲ್ಲೂ ಕ್ರೀಡಾ ಕೋಟದ ಅಡಿ ಶೇ. 2ರಷ್ಟು ಉದ್ಯೋಗ ಮೀಸಲಾತಿ ನೀಡುವ ಬಗ್ಗೆ ಬೇಡಿಕೆಯಿದೆ. ಅದನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ತೀರ್ಮಾನಿಸಲಾಗುವುದೆಂದು ಹೇಳಿದರು
ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಈವರೆಗಿನ ಅತಿ ಹೆಚ್ಚು ಪದಕ ಗಳಿಸಿದ್ದಾರೆ. ಕಳೆದ ಬಾರಿಯ ಏಷ್ಯನ್ ಗೇಮ್ಸ್ ನಲ್ಲಿ 70 ಇದ್ದಂತಹ ಪದಕಗಳ ಸಂಖ್ಯೆ ಈ ಬಾರಿ 107ಕ್ಕೆ ಹೆಚ್ಚಾಗಿದೆ. ಪದಕ ವಿಜೇತರಲ್ಲಿ ಕನ್ನಡಿಗರೂ ಇದ್ದು, ಇದು ರಾಜ್ಯದ ಗೌರವ ಹೆಚ್ಚುವಂತೆ ಮಾಡಿದೆ. ರಾಜ್ಯದ 8 ಮಂದಿ ಕ್ರೀಡಾಪಟುಗಳು ಪದಕ ಪಡೆದಿದ್ದಾರೆ. ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಅದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಏಷ್ಯನ್ ಗೇಮ್ಸ್ನಲ್ಲಿ ಪದಕ ಗೆದ್ದವರು ಒಲಿಪಿಕ್‌ಸ್ನಲ್ಲೂ ಪದಕ ಗೆಲ್ಲಲು ಪ್ರಯತ್ನಿಸಬೇಕು ಎಂದು ಆಶಿಸಿದರು.
ಏಷ್ಯನ್ ಗೇಮ್ ನಲ್ಲಿ ನಮ್ಮ ನಾಡಿನ ಕ್ರೀಡಾಪಟುಗಳ ಸಾಧನೆ ಕರ್ನಾಟಕ ಮಾತ್ರವಲ್ಲ, ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ. ಮುಂಬರುವ ಒಲಿಂಪಿಕ್‌ನಲ್ಲೂ ದೇಶ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಹಾರೈಸುತ್ತೇನೆ.
- ಮುಖ್ಯಮಂತ್ರಿ pic.twitter.com/61eWZh2g9r
undefined
ಬಾಂಗ್ಲಾ ಎದುರಿನ ಪಂದ್ಯಕ್ಕೂ ಮುನ್ನ ಬಿಗ್ ಶಾಕ್: ರೋಹಿತ್ ಶರ್ಮಾ ಮೇಲೆ ಪೊಲೀಸರಿಂದ 3 ಪ್ರತ್ಯೇಕ ಕೇಸ್ ದಾಖಲು..!
ರಾಜ್ಯ ಸರ್ಕಾರ ಕ್ರೀಡೆಗೆ ಸಾಕಷ್ಟು ಉತ್ತೇಜನ ನೀಡುತ್ತಿದೆ. ನಾನು ಈ ಹಿಂದೆ ಮುಖ್ಯಮಂತ್ರಿ ಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ನಗದು ಬಹುಮಾನ ಘೋಷಿಸಿದ್ದೆ. ಅದರಲ್ಲೂ ದೇಶದ ಬೇರೆಲ್ಲ ರಾಜ್ಯಗಳಿಗಿಂತ ಅತಿಹೆಚ್ಚು ಮೊತ್ತದ ನಗದು ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂಬ ಹೆಗ್ಗಳಿಕೆಯೂ ಇದೆ ಎಂದರು. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಗಳ ಸಲಹೆಗಾರ ನಸೀರ್ ಅಹಮದ್, ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಇತರರಿದ್ದರು.
ಅಹಮದಾಬಾದ್‌ನಲ್ಲಿ ಬಿಸಿಸಿಐ ವಾಮಾಚಾರ ಮಾಡಿ ಪಾಕಿಸ್ತಾನವನ್ನು ಸೋಲಿಸಿದೆ..!
5ರಿಂದ 25 ಲಕ್ಷ ರು.ವರೆಗೆ ಬಹುಮಾನ: ಪದಕ ವಿಜೇತ ಕ್ರೀಡಾಪಟುಗಳಾದ ರಾಜೇಶ್ವರಿ ಗಾಯಕ್ವಾಡ್ (ಕ್ರಿಕೆಟ್), ರೋಹನ್ ಬೋಪಣ್ಣ (ಟೆನಿಸ್), ಮಿಜೋ ಚಾಕೋ ಕುರಿಯನ್ (ಅಥ್ಲೆಟಿಕ್‌ಸ್), ಮಿಥುನ್ ಮಂಜುನಾಥ್, ಸಾಯಿ ಪ್ರತೀಕ್ (ಬ್ಯಾಡ್ಮಿಂಟನ್), ದಿವ್ಯಾ (ಶೂಟಿಂಗ್), ಅದಿತಿ ಅಶೋಕ್ (ಗಾಲ್ಫ್) ಹಾಗೂ ತರಬೇತುದಾರರಾದ ತೇಜಸ್ವಿನಿ ಬಾಯಿ (ಮಹಿಳಾ ಕಬಡ್ಡಿ), ಬಿ.ಎಸ್. ಅಂಕಿತಾ (ಮಹಿಳಾ ಹಾಕಿ), ಸಿ.ಎ. ಕುಟ್ಟಪ್ಪ (ಬಾಕ್ಸಿಂಗ್ ತಂಡದ ಮುಖ್ಯ ತರಬೇತುದಾರ) ಇವರನ್ನು ಸನ್ಮಾನಿಸಲಾಯಿತು. ಇದರಲ್ಲಿ ಚಿನ್ನದ ಪದಕ ಗೆದ್ದ ಕ್ರೀಡಾಪಟುಗಳಿಗೆ ತಲಾ 25 ಲಕ್ಷ ರು., ಬೆಳ್ಳಿ ಪದಕ ಗೆದ್ದ ಕ್ರೀಡಾಪಟುಗಳಿಗೆ ತಲಾ 15 ಲಕ್ಷ ರು. ಹಾಗೂ ಮೂವರು ರಾಜ್ಯದ ತರಬೇತುದಾರರಿಗೆ ತಲಾ 5 ಲಕ್ಷ ರು.ನೀಡಲಾಯಿತು.