
ಜಕರ್ತಾ(ಆ.20): ಏಷ್ಯನ್ ಗೇಮ್ಸ್ ಕ್ರೀಡಾಕೂಡದಲ್ಲಿ ಭಾರತ ಕಬಡ್ಡಿ ತಂಡದ ಮೇಲೆ ಎಲ್ಲರ ನಿರೀಕ್ಷೆಗಳಿವೆ. ಕಾರಣ ಏಷ್ಯನ್ ಗೇಮ್ಸ್‌ನಲ್ಲಿ ಸತತ 7 ಚಿನ್ನದ ಪದಕ ಗೆದ್ದಿರುವ ಭಾರತೀಯ ಕಬಡ್ಡಿ ತಂಡಕ್ಕೆ ಇದೀಗ ಸೌತ್ ಕೊರಿಯಾ ಶಾಕ್ ನೀಡಿದೆ.
ಸೌತ್ ಕೊರಿಯಾ ವಿರುದ್ಧದ ಏಷ್ಯನ್ ಗೇಮ್ಸ್ ಕಬಡ್ಡಿ ಪಂದ್ಯದಲ್ಲಿ ಭಾರತ 23-34 ಅಂಕಗಳ ಅಂತರದಲ್ಲಿ ವಿರೋಚಿತ ಸೋಲು ಕಂಡಿತು. ಅಂತಿಮ ರೈಡ್‌ನಲ್ಲಿ ಭಾರತ ಅಂಕ ತರುವಲ್ಲಿ ವಿಫಲವಾಗಿದ್ದಲ್ಲದ್ದೆ, ಎದುರಾಳಿಗೆ ಅಂಕ ಬಿಟ್ಟುಕೊಟ್ಟಿತು. ಹೀಗಾಗಿ ಸೋಲು ಕಂಡಿತು.
ಜಿದ್ದಾಜಿದ್ದಿನಿಂದ ಕೂಡಿದ ಹೋರಾಟದಲ್ಲಿ ಕೊರಿಯಾ ಗೆಲುವಿನ ನಗೆ ಬೀರಿತು. ಏಷ್ಯನ್ ಗೇಮ್ಸ್ ಕಬಡ್ಡಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ಸೋಲು ಕಂಡಿದೆ. ಮುಂದಿನ ಪಂದ್ಯದಲ್ಲಿ ಭಾರತ, ಥಾಯಿಲೆಂಡ್ ವಿರುದ್ಧ ಹೋರಾಟ ನಡೆಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.