ಏಷ್ಯನ್ ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ ಓಮನ್ ತಂಡವನ್ನು ಅನಾಯಾಸವಾಗಿ ಮಣಿಸಿದ ಭಾರತ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ತೆಹ್ರಾನ್[ಸೆ.16]: ಭಾರತ ಪುರುಷರ ವಾಲಿಬಾಲ್ ತಂಡ, ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಇದರೊಂದಿಗೆ 2020 ಏಷ್ಯಾ ಒಲಿಂಪಿಕ್ ಅರ್ಹತಾ ಟೂರ್ನಿಗೆ ಪ್ರವೇಶ ಪಡೆದಿದೆ.
ಪಂತ್‌ಗೆ ಖಡಕ್ ಎಚ್ಚರಿಕೆ ಕೊಟ್ಟ ರವಿ ಶಾಸ್ತ್ರಿ!
‘ಸಿ’ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಭಾರತ, ಭಾನುವಾರ ತನ್ನ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಒಮಾನ್ ವಿರುದ್ಧ 22-25, 25-12, 25-21, 25-19 ಸೆಟ್‌ಗಳಲ್ಲಿ ಗೆಲುವು ಸಾಧಿಸಿತು. ಆದರೆ ಚೀನಾ ಹಾಗೂ ಕಜಕಸ್ತಾನ ನಡುವಿನ ಪಂದ್ಯದ ಫಲಿತಾಂಶಕ್ಕಾಗಿ ಭಾರತ ಕಾಯಬೇಕಿತ್ತು. ಕಜಕಸ್ತಾನ ವಿರುದ್ಧ ಚೀನಾ 25-23, 25-19, 25-20 ಸೆಟ್‌ಗಳಲ್ಲಿ ಸುಲಭ ಗೆಲುವು ಪಡೆದು ಗುಂಪಿನಲ್ಲಿ ಅಗ್ರಸ್ಥಾನ ಪಡೆಯಿತು. 3 ಪಂದ್ಯಗಳಲ್ಲಿ 2 ಗೆಲುವು, 1 ಸೋಲಿನೊಂದಿಗೆ ಒಟ್ಟು 5 ಅಂಕ ಪಡೆದು ಗುಂಪಿನಲ್ಲಿ 2ನೇ ಸ್ಥಾನ ಪಡೆದ ಭಾರತ, ಅಂತಿಮ 8ರ ಘಟ್ಟಕ್ಕೆ ಪ್ರವೇಶಿಸಿತು.
ಏಷ್ಯನ್ ವಾಲಿಬಾಲ್: ಭಾರತ ಫೈನಲ್ ಪ್ರವೇಶ
ಕ್ವಾರ್ಟರ್ ಫೈನಲ್ ವರ್ಗೀಕರಣ ಸುತ್ತಿನಲ್ಲಿ ಭಾರತ ‘ಇ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಸೆಮಿಫೈನಲ್ನಲ್ಲಿ ಸ್ಥಾನಕ್ಕಾಗಿ ಯಾವ ತಂಡದ ವಿರುದ್ಧ ಸೆಣಸಲಿದೆ ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಿದೆ. ಚೀನಾ, ಆಸ್ಪ್ರೇಲಿಯಾ, ಇರಾನ್, ದಕ್ಷಿಣ ಕೊರಿಯಾ, ಜಪಾನ್, ಚೈನೀಸ್ ತೈಪೆ ಹಾಗೂ ಪಾಕಿಸ್ತಾನ ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಿವೆ.