
ಬ್ರಿಸ್ಬೇನ್(ನ.23): ಸಾಂಪ್ರದಾಯಿಕ ಎದುರಾಳಿಗಳಾದ ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಿನ ಆ್ಯಷಸ್ ಸರಣಿ ಮೊದಲ ಪಂದ್ಯ ಇಂದು ಆರಂಭಗೊಂಡಿದ್ದು, ಮೊದಲ ದಿನ ಕಾಂಗರೂ ಪಡೆ ಮೇಲುಗೈ ಸಾಧಿಸಿದೆ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಆರಂಭದಲ್ಲೇ ಆಲಿಸ್ಟರ್ ಕುಕ್ ವಿಕೆಟ್ ಕಳೆದುಕೊಂಡು ಆಘಾತ ಎದರಿಸಿತು. ಮಿಚೆಲ್ ಸ್ಟಾರ್ಕ್ ಆಸ್ಟ್ರೇಲಿಯಾಕ್ಕೆ ಮೊದಲ ಮುನ್ನಡೆ ಒದಗಿಸಿದರು. ಆದರೆ ನಂತರ ಎರಡನೇ ವಿಕೆಟ್'ಗೆ ಜತೆಯಾದ ಜೇಮ್ಸ್ ವಿನ್ಸ್ ಹಾಗೂ ಮಾರ್ಕ್ ಸ್ಟೋನ್'ಮನ್ ಭರ್ಜರಿ ಶತಕದ ಜತೆಯಾಟವಾಡುವ ಮೂಲಕ ಇಂಗ್ಲೆಂಡ್ ತಂಡಕ್ಕೆ ಆಸರೆಯಾದರು. ಸ್ಟೋನ್'ಮನ್(52) ಹಾಗೂ ವಿನ್ಸ್(83) ತಲಾ ಅರ್ಧಶತಕ ಬಾರಿಸಿ ವಿಕೆಟ್ ಒಪ್ಪಿಸಿದರು. ಮೊದಲ ದಿನದಾಟದ ಕೊನೆಯ ಸೆಷನ್'ನಲ್ಲಿ ಆಂಗ್ಲರ ನಾಯಕ ರೂಟ್ ವಿಕೆಟ್ ಪಡೆದು ಆಸ್ಟ್ರೇಲಿಯಾ ಕಮ್'ಬ್ಯಾಕ್ ಮಾಡಿತು.
ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ 2 ವಿಕೆಟ್ ಪಡೆದು ಮಿಂಚಿದರು. ಪಂದ್ಯಕ್ಕೆ ಕೆಲಕಾಲ ವರುಣ ಅಡ್ಡಿಪಡಿಸಿತು.
ಸಂಕ್ಷಿಪ್ತ ಸ್ಕೋರ್:
ಇಂಗ್ಲೆಂಡ್: 196/4(ವಿನ್ಸ್ 83, ಸ್ಟೋನ್‌ಮನ್ 53,
ಕಮಿನ್ಸ್; 59/2)
(ಮೊದಲ ದಿನದಂತ್ಯಕ್ಕೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.