
ಮೆಲ್ಬರ್ನ್[ಡಿ.30]: ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದು 9 ತಿಂಗಳು ನಿಷೇಧಕ್ಕೆ ಗುರಿಯಾಗಿದ್ದ ಆಸಿಸ್’ನ ಕ್ಯಾಮರೊನ್ ಬೆನ್’ಕ್ರಾಫ್ಟ್ ಇದೀಗ ನಿಷೇಧದ ಬಳಿಕ ಮೊದಲ ಪಂದ್ಯವನ್ನಾಡಿದ್ದು, ಕೇವಲ ಮೂರು ಎಸೆತಗಳನ್ನು ಎದುರಿಸಿ ವಿಕೆಟ್ ಒಪ್ಪಿಸಿದ್ದಾರೆ.
ಬಿಗ್‌ಬ್ಯಾಶ್ ಲೀಗ್‌ನಲ್ಲಿ ಪರ್ತ್ ಸ್ಕಾಚರ್ಸ್ ತಂಡದ ಪರ ಕಣಕ್ಕಿಳಿದಿದ್ದ ಬೆನ್’ಕ್ರಾಫ್ಟ್ ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. 26 ವರ್ಷದ ಬೆನ್’ಕ್ರಾಫ್ಟ್ ತಂಡ 16/3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಕಣಕ್ಕಿಳಿದಿದ್ದ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಮೊದಲ ಎಸೆತದಲ್ಲೇ 2 ರನ್ ಕಲೆಹಾಕಿದರು. ಎರಡನೇ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. ಇನ್ನು ಮೂರನೇ ಎಸೆತದಲ್ಲಿ ವಿಕೆಟ್’ಕೀಪರ್’ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.
Cameron Bancroft's Perth Scorchers return lasted just three balls 👀 #BBL08pic.twitter.com/5cgSAPqxb8
ಇತ್ತೀಚೆಗಷ್ಟೇ ಬಾಲ್ ಟ್ಯಾಂಪರಿಂಗ್ ಕುರಿತಂತೆ ತುಟಿಬಿಚ್ಚಿದ್ದ ಬೆನ್’ಕ್ರಾಫ್ಟ್, ಈ ವಿವಾದಕ್ಕೆ ಉಪನಾಯಕ ಡೇವಿಡ್ ವಾರ್ನರ್ ಮಾಸ್ಟರ್’ಮೈಂಡ್ ಎಂದು ಹೇಳಿದ್ದರು. ಇದಷ್ಟೇ ಅಲ್ಲದೇ ಯೋಗಶಿಕ್ಷಕರಾಗುವತ್ತ ಮನಸು ಮಾಡಿರುವುದಾಗಿಯೂ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.