ಸ್ಮಿತ್ ರ‍್ಯಾಂಕಿಂಗ್‌ನಲ್ಲಿ ಮತ್ತಷ್ಟು ಮುಂದೆ, ಕೊಹ್ಲಿಗೆ 2ನೇ ಸ್ಥಾನವೇ ಫಿಕ್ಸ್..?

By Web Desk  |  First Published Sep 10, 2019, 6:51 PM IST

ಬಾಲ್ ಟ್ಯಾಂಪರಿಂಗ್ ಮಾಡಿ ಒಂದು ವರ್ಷ ನಿಷೇಧಕ್ಕೆ ಗುರಿಯಾಗಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿರುವ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ತಾವಾಡಿದ ಕೇವಲ ಮೂರು ಪಂದ್ಯಗಳಲ್ಲೇ ನಂ.1 ಶ್ರೇಯಾಂಕಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...


ದುಬೈ[ಸೆ.10]: ಆ್ಯಷಸ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಐಸಿಸಿ ನೂತನವಾಗಿ ಬಿಡುಗಡೆ ಮಾಡಿದ ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲೇ ಉಳಿದಿದ್ದಾರೆ. 

ಆ್ಯಷಸ್ ಕದನ: ಇಂಗ್ಲೆಂಡ್ ವಿರುದ್ಧ ಗೆದ್ದ ಆಸ್ಟ್ರೇಲಿಯಾ

Latest Videos

undefined

ಹೌದು ಮಂಗಳವಾರ ಐಸಿಸಿ ಬಿಡುಗಡೆ ಮಾಡಿದ ನೂತನ ಟೆಸ್ಟ್ ಬ್ಯಾಟ್ಸ್’ಮನ್’ಗಳ ಶ್ರೇಯಾಂಕದಲ್ಲಿ ಸ್ಮಿತ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆ್ಯಷಸ್ ಸರಣಿಯ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದಲ್ಲಿ ಸ್ಟೀವ್ ಸ್ಮಿತ್ 211 ರನ್ ಬಾರಿಸುವ ಆಸೀಸ್ ಟೆಸ್ಟ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದರೊಂದಿಗೆ ಒಟ್ಟು 937 ರೇಟಿಂಗ್ ಅಂಕ ಕಲೆಹಾಕುವುದರೊಂದಿಗೆ ನಂ.1 ಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಂಡಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 903 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲೇ ಉಳಿದಿದ್ದಾರೆ. 

ಸ್ಮಿತ್ ಇನ್ನೊಂದು ಟೆಸ್ಟ್ ಪಂದ್ಯ ಆಡಲಿದ್ದು, ಇನ್ನಷ್ಟು ರನ್ ಕಲೆಹಾಕಿದರೆ ಮತ್ತಷ್ಟು ರೇಟಿಂಗ್ ಅಂಕ ಕಲೆಹಾಕಲಿದ್ದಾರೆ. ಸ್ಮಿತ್ ಹಿಂದಿಕ್ಕಲು ಕೊಹ್ಲಿ ತವರಿನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಬೇಕಿದೆ. 

2025ರಲ್ಲಿ ಕೊಹ್ಲಿ ಪಾಕ್ ತಂಡದ ಆರಂಭಿಕ; ನೆಟ್ಟಿಗರ ಅತಿರೇಕಕ್ಕೆ ಆಕ್ರೋಶ!

ಇನ್ನು ಮ್ಯಾಂಚೆಸ್ಟರ್ ಟೆಸ್ಟ್’ನಲ್ಲಿ 7 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ತಂಡಕ್ಕೆ ಸೋಲಿನ ಆಘಾತ ನೀಡಿದ್ದ ಆಸೀಸ್ ವೇಗಿ ಪ್ಯಾಟ್ ಕಮಿನ್ಸ್ 914 ರೇಟಿಂಗ್ ಅಂಕಗಳೊಂದಿಗೆ ನಂ.1 ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ವೇಗಿ ಕಗಿಸೋ ರಬಾಡ 851 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಆಲ್ರೌಂಡರ್ ವಿಭಾಗದಲ್ಲಿ ವಿಂಡೀಸ್ ನಾಯಕ ಜೇಸನ್ ಹೋಲ್ಡರ್[472 ರೇಟಿಂಗ್ ಅಂಕ] ಅಗ್ರಸ್ಥಾನದಲ್ಲಿದ್ದು, ಬಾಂಗ್ಲಾ ನಾಯಕ ಶಕೀಬ್ ಅಲ್ ಹಸನ್ ಎರಡನೇ ಸ್ಥಾನದಲ್ಲಿದ್ದಾರೆ.

ತಂಡಗಳ ವಿಭಾಗದಲ್ಲಿ ಭಾರತ ನಂ.1 ಸ್ಥಾನದಲ್ಲೇ ಮುಂದುವರೆದಿದ್ದು, ಆ ಬಳಿಕ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಟಾಪ್ 3 ಶ್ರೇಯಾಂಕಿತ ತಂಡಗಳು ಎನಿಸಿವೆ.  

click me!