ಮಾ.31ರಿಂದ ಏ.13ರ ವರೆಗೂ ಯುಎಇನಲ್ಲಿ ಪಾಕಿಸ್ತಾನ ವಿರುದ್ಧ ಏಕದಿನ ಸರಣಿ ನಡೆಯಲಿದೆ. ನಿಷೇಧದ ಅವಧಿ ಮುಕ್ತಾಯಗೊಂಡ 48 ಗಂಟೆಗಳಲ್ಲಿ ಸ್ಮಿತ್ ಹಾಗೂ ವಾರ್ನರ್ ಆಸ್ಪ್ರೇಲಿಯಾ ತಂಡದಲ್ಲಿ ಆಡುವ ಸಾಧ್ಯತೆ ಇದೆ.
ನವದೆಹಲಿ[ಡಿ.25]: ಆಸ್ಪ್ರೇಲಿಯಾದ ನಿಷೇಧಿತ ಕ್ರಿಕೆಟಿಗರಾದ ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್, ಮಾರ್ಚ್’ನಲ್ಲಿ ಪಾಕಿಸ್ತಾನ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಆಯ್ಕೆಯಾಗುವ ವಿಶ್ವಾಸದಲ್ಲಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲು ಸಿದ್ಧತೆ ನಡೆಸಿದ್ದಾರೆ.
ಮಾ.31ರಿಂದ ಏ.13ರ ವರೆಗೂ ಯುಎಇನಲ್ಲಿ ಪಾಕಿಸ್ತಾನ ವಿರುದ್ಧ ಏಕದಿನ ಸರಣಿ ನಡೆಯಲಿದೆ. ನಿಷೇಧದ ಅವಧಿ ಮುಕ್ತಾಯಗೊಂಡ 48 ಗಂಟೆಗಳಲ್ಲಿ ಸ್ಮಿತ್ ಹಾಗೂ ವಾರ್ನರ್ ಆಸ್ಪ್ರೇಲಿಯಾ ತಂಡದಲ್ಲಿ ಆಡುವ ಸಾಧ್ಯತೆ ಇದೆ. ಒಂದೊಮ್ಮೆ ಇವರಿಬ್ಬರು ಪಾಕ್ ವಿರುದ್ಧ ಆಡಲು ಆಯ್ಕೆಯಾದರೆ, ಐಪಿಎಲ್‌ನ ಬಹುತೇಕ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ.
ಮಾ.29ರಿಂದ ಐಪಿಎಲ್ ಆರಂಭಗೊಳ್ಳಲಿದ್ದು, ವಿಶ್ವಕಪ್ ತಂಡದಲ್ಲಿ ಆಯ್ಕೆಯಾಗುವ ಆಟಗಾರರು ಮೇ ಮೊದಲ ವಾರದಲ್ಲಿ ರಾಷ್ಟ್ರೀಯ ತಂಡ ಕೂಡಿಕೊಳ್ಳಬೇಕು ಎಂದು ಕ್ರಿಕೆಟ್ ಆಸ್ಪ್ರೇಲಿಯಾ ಸೂಚಿಸಿದೆ.