
ಮೆಲ್ಬರ್ನ್[ಫೆ.06]: ಆಸ್ಪ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಮೇ 30ರಿಂದ ಆರಂಭಗೊಳ್ಳಲಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕ್ಷೀಣಿಸುತ್ತಿದೆ.
ನಿಷೇಧ ಅಂತ್ಯ: ಮೊದಲ ಪಂದ್ಯದಲ್ಲಿ ಬೆನ್’ಕ್ರಾಫ್ಟ್ ಫ್ಲಾಫ್ ಶೋ
ಮೊಣಕೈ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸ್ಮಿತ್ ಗುಣಮುಖರಾಗಲು ನಿರೀಕ್ಷೆಗೂ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವ ಕಾರಣ, ಅಭ್ಯಾಸದ ಕೊರತೆಯಿಂದಾಗಿ ಅವರನ್ನು ಆಯ್ಕೆಗೆ ಪರಿಗಣಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆದರೆ ಸ್ಮಿತ್ ವಿಶ್ವಕಪ್ ಬಳಿಕ ನಡೆಯಲಿರುವ ಪ್ರತಿಷ್ಠಿತ ಆ್ಯಷಸ್ ಸರಣಿ ವೇಳೆಗೆ ತಂಡಕ್ಕೆ ಮರಳುವ ನಿರೀಕ್ಷೆ ಇದೆ. ಇದೇ ವೇಳೆ ಡೇವಿಡ್ ವಾರ್ನರ್ ಮೊಣಕೈ ಗಾಯದಿಂದ ಚೇತರಿಸಿಕೊಂಡಿದ್ದು ನಿಷೇಧ ಅವಧಿ ಮುಕ್ತಾಯಗೊಳ್ಳುತ್ತಿದ್ದಂತೆ ತಂಡಕ್ಕೆ ವಾಪಸಾಗಲಿದ್ದು, ಪಾಕಿಸ್ತಾನ ವಿರುದ್ಧ ಯುಎಇನಲ್ಲಿ ಸರಣಿ ಆಡಲಿದ್ದಾರೆ ಎನ್ನಲಾಗಿದೆ.
ತನ್ನವರಿಂದಲೇ ಸ್ಲೆಡ್ಜಿಂಗ್: ಮೈದಾನ ತೊರೆದ ವಾರ್ನರ್!
ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯ ವೇಳೆ ಬಾಲ್ ಟ್ಯಾಂಪರಿಂಗ್ ಮಾಡಿ ಸಿಕ್ಕಿಬಿದ್ದು ಒಂದು ವರ್ಷ ನಿಷೇಧಕ್ಕೆ ಗುರಿಯಾಗಿರುವ ಸ್ಮಿತ್-ವಾರ್ನರ್ ನಿಷೇಧದ ಅವಧಿ ಮಾರ್ಚ್ 28ರಂದು ಕೊನೆಯಾಗಲಿದೆ. ಐಪಿಎಲ್’ನಲ್ಲಿ ಈ ಇಬ್ಬರು ಆಟಗಾರರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.