
ಕರಾಚಿ(ಫೆ.09): ಪಾಕಿಸ್ತಾನ ಏಕದಿನ ತಂಡದ ನೂತನ ಸಾರಥಿಯಾಗಿ ಸರ್ಫರಾಜ್ ಅಹಮದ್ ಆಯ್ಕೆಯಾಗಿದ್ದಾರೆ.
ಇತ್ತೀಚಿನ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪಾಕ್ ತಂಡ ದಯನೀಯ ಪ್ರದರ್ಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಜರ್ ಅಲಿ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಈಗಾಗಲೇ ಟಿ20 ತಂಡದ ನಾಯಕನಾಗಿಯೂ ಕಾರ್ಯನಿರ್ವಹಿಸುತ್ತಿರುವ ವಿಕೆಟ್'ಕೀಪರ್ ಬ್ಯಾಟ್ಸ್‌ಮನ್ ಸರ್ಫರಾಜ್, ಇದೇ ಏಪ್ರಿಲ್ ತಿಂಗಳಿನಲ್ಲಿ ವೆಸ್ಟ್‌ಇಂಡೀಸ್ ವಿರುರದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಪ್ರಸಕ್ತ ಎಂಟನೇ ಶ್ರೇಯಾಂಕದಲ್ಲಿರುವ ಪಾಕಿಸ್ತಾನ ತಂಡವು ವಿಶ್ವಕಪ್ ಅರ್ಹತೆಗಳಿಸಿಕೊಳ್ಳಲೂ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಆಸೀಸ್ ಎದುರು 4-1 ಅಂತರದಲ್ಲಿ ಮುಖಭಂಗ ಅನುಭವಿಸಿರುವ ಪಾಕ್ ತಂಡಕ್ಕೆ ಪಿಸಿಬಿ ಮೇಜರ್ ಸರ್ಜರಿ ಮಾಡಿದೆ.
ಅಂದಹಾಗೆ ಪಾಕ್ ಟೆಸ್ಟ್ ತಂಡದ ನಾಯಕನಾಗಿ ಮಿಸ್ಬಾಲ್ ಉಲ್ ಹಕ್ ಅವರೇ ಮುಂದುವರೆಯಲಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮೂಲಗಳು ಖಚಿತಪಡಿಸಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.