
ಹೈದರಾಬಾದ್(ಜ.14): ಭಾರತ ತಂಡದ ಮಾಜಿ ಕ್ರಿಕೆಟಿಗ ಮೊಹಮದ್ ಅಜರುದ್ದೀನ್ ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್‌ಸಿಎ) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಬಯಸಿ ಸಲ್ಲಿಸಿದ್ದ ನಾಮಪತ್ರ ತಿಸ್ಕೃತಗೊಂಡಿದೆ.
2000ದ ದ.ಆಫ್ರಿಕಾ ವಿರುದ್ಧದ ಸರಣಿಯ ವೇಳೆ ಮ್ಯಾಚ್ ಫಿಕ್ಸಿಂಗ್ ಆರೋಪದಡಿ ಬಿಸಿಸಿಐನಿಂದ ಆಜೀವ ನಿಷೇಧಕ್ಕೆ ಗುರಿಯಾಗಿದ್ದ ಅವರ ಮೇಲಿನ ನಿಷೇಧವನ್ನು ಹೈದರಾಬಾದ್ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ್ದರೂ, ಬಿಸಿಸಿಐ ನಿಷೇಧವನ್ನು ಹಿಂಪಡೆದಿರುವ ಬಗ್ಗೆ ಯಾವುದೇ ಸ್ಪಷ್ಟನೆ ಹೊರಬಂದಿಲ್ಲ.
ಅಜರ್ ಈ ಕುರಿತಂತೆ ಪತ್ರ ಬರೆದು ಕೋರಿದರೂ, ಬಿಸಿಸಿಐನಿಂದ ಯಾವುದೇ ಸ್ಪಷ್ಟನೆ ಬಾರದ ಹಿನ್ನೆಲೆಯಲ್ಲಿ ರಿಟರ್ನಿಂಗ್ ಆಫೀಸರ್ ಕೆ. ರಾಜೀವ್ ರೆಡ್ಡಿ ನಾಮಪತ್ರ ತಿರಸ್ಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
1992, 1996, 1999ರ ವಿಶ್ವಕಪ್‌ನಲ್ಲಿ ಅಜರ್ ಭಾರತವನ್ನು ಮುನ್ನಡೆಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.