ಪ್ರಕಾಶ್ ಪಡುಕೋಣೆಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ಪ್ರದಾನ

By Suvarna Web DeskFirst Published Sep 11, 2017, 10:54 PM IST
Highlights

ಪ್ರಕಾಶ್ 1980ರಲ್ಲಿ ಆಲ್ ಇಂಗ್ಲೆಂಡ್, 1983ರಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು, 1978ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಜಯಿಸಿದ್ದರು. 1972ರಲ್ಲಿ ಅರ್ಜುನ ಪ್ರಶಸ್ತಿ, 1982ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

ಕೊಚ್ಚಿ(ಸೆ.11): ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಇದೇ ಮೊದಲ ಬಾರಿಗೆ, ದಿಗ್ಗಜ ಪ್ರಕಾಶ್ ಪಡುಕೋಣೆ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಭಾರತ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ಹಿಮಾಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಪ್ರಶಸ್ತಿಯೊಂದಿಗೆ 10 ಲಕ್ಷ ನಗದನ್ನು ನೀಡಲಾಗುತ್ತಿದೆ. ಇತ್ತೀಚೇಗಷ್ಟೇ ಬೆಂಗಳೂರಿನಲ್ಲಿ ನಡೆದಿದ್ದ ಬಿಎಐ ಕಾರ್ಯನಿರ್ವಾಹಕ ಸಭೆಯಲ್ಲಿ ಈ ವರ್ಷದಿಂದಲೇ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡಬೇಕು ಎಂದು ನಿರ್ಧರಿಸಲಾಗಿತ್ತು. ಅದರಂತೆ ಈ ಬಾರಿ ಪ್ರಕಾಶ್ ಪಡುಕೋಣೆಗೆ ಪ್ರಶಸ್ತಿ ನೀಡಲಾಗಿದೆ. ಸೋಮವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪ್ರಕಾಶ್ ಪಡುಕೋಣೆ ಅವರಿಗೆ ಈ ಪ್ರಶಸ್ತಿ ನೀಡಬೇಕು ಎನ್ನುವುದು ಎಲ್ಲರ ತೀರ್ಮಾನವಾಗಿತ್ತು. ಶೀಘ್ರದಲ್ಲಿ ನವದೆಹಲಿಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿ ಪ್ರಕಾಶ್ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದು ಬಿಸ್ವಾ ಶರ್ಮಾ ಹೇಳಿದ್ದಾರೆ. ಪ್ರಕಾಶ್ 1980ರಲ್ಲಿ ಆಲ್ ಇಂಗ್ಲೆಂಡ್, 1983ರಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು, 1978ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಜಯಿಸಿದ್ದರು. 1972ರಲ್ಲಿ ಅರ್ಜುನ ಪ್ರಶಸ್ತಿ, 1982ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

click me!