
ಚಾಂಗಜೌ(ಚೀನಾ): ಒಲಿಂಪಿಕ್ಸ್ ಮತ್ತು ವಿಶ್ವಚಾಂಪಿಯನ್‌ಶಿಪ್ ಬೆಳ್ಳಿ ವಿಜೇತೆ ಪಿ.ವಿ. ಸಿಂಧು, ಇಲ್ಲಿ ಮಂಗಳವಾರ ಆರಂಭಗೊಂಡ ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಿ ಕ್ವಾರ್ಟರ್‌ಗೆ ಪ್ರವೇಶಿಸಿದರೆ, ಸೈನಾ ನೆಹ್ವಾಲ್ ಮೊದಲ ಸುತ್ತಲ್ಲೇ ಸೋತು ಹೊರಬಿದ್ದಿದ್ದಾರೆ.
ಇಲ್ಲಿನ ಒಲಿಂಪಿಕ್ ಕ್ರೀಡಾ ಕೇಂದ್ರದಲ್ಲಿ ನಡೆದ ಮಹಿಳಾ ಸಿಂಗಲ್ಸ್ ಮೊದಲ ಸುತ್ತಿನಲ್ಲಿ ಸಿಂಧು, ಜಪಾನ್‌ನ ಸೇನಾ ಕವಾಕಮಿ ವಿರುದ್ಧ 21-15, 21-13 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. ಇದೇ ವೇಳೆ ಸೈನಾ, ಕೊರಿಯಾದ ಸಂಗ್ ಜಿ ಹ್ಯೂನ್ ಎದುರು 22-20, 8-21, 14-21 ಗೇಮ್‌ಗಳಲ್ಲಿ ಸೋತು ಹೊರಬಿದ್ದರು.
ಪುರುಷರ ಡಬಲ್ಸ್‌ನಲ್ಲಿ ಮನು ಅತ್ರಿ- ಸುಮಿತ್ ರೆಡ್ಡಿ ಜೋಡಿಯು ಚೈನೀಸ್ ತೈಪೆಯ ಲಿಯೋ ಮಿನ್ ಚುನ್-ಸು ಚಿಂಗ್ ಹೆಂಗ್ ವಿರುದ್ಧ 13-21, 21-13, 21-12 ಗೇಮ್‌ಗಳಲ್ಲಿ ಗೆಲುವು ಸಾಧಿಸಿ, 2ನೇ ಸುತ್ತಿಗೆ ಪ್ರವೇಶಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.