ಗುರುವಾರ ನಡೆದ ಮಹಿಳಾ ಸಿಂಗಲ್ಸ್‌ನ ಪ್ರಿ ಕ್ವಾರ್ಟರ್‌ನಲ್ಲಿ ಸಿಂಧು, ದಕ್ಷಿಣ ಕೊರಿಯಾದ ಸಂಗ್ ಜಿ ಹ್ಯೂನ್ ವಿರುದ್ಧ 24-26, 20-22 ಗೇಮ್‌ಗಳಲ್ಲಿ ಸೋಲುಂಡರು. ಇದರೊಂದಿಗೆ ಮಹಿಳಾ ಸಿಂಗಲ್ಸ್ ನಲ್ಲಿ ಭಾರತದ ಸವಾಲು ಅಂತ್ಯವಾಗಿದೆ.
ಕೋವ್ಲೊನ್ (ಹಾಂಕಾಂಗ್): ಭಾರತದ ತಾರಾ ಶಟ್ಲರ್ ಸಿಂಧು, ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಪ್ರಿಕ್ವಾರ್ಟರ್‌ನಲ್ಲಿ ಸೋತು ಹೊರಬಿದ್ದಿದ್ದರೆ, ಕಿದಂಬಿ ಶ್ರೀಕಾಂತ್ ಸಮೀರ್ ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.
ಗುರುವಾರ ನಡೆದ ಮಹಿಳಾ ಸಿಂಗಲ್ಸ್‌ನ ಪ್ರಿ ಕ್ವಾರ್ಟರ್‌ನಲ್ಲಿ ಸಿಂಧು, ದಕ್ಷಿಣ ಕೊರಿಯಾದ ಸಂಗ್ ಜಿ ಹ್ಯೂನ್ ವಿರುದ್ಧ 24-26, 20-22 ಗೇಮ್‌ಗಳಲ್ಲಿ ಸೋಲುಂಡರು. ಇದರೊಂದಿಗೆ ಮಹಿಳಾ ಸಿಂಗಲ್ಸ್ ನಲ್ಲಿ ಭಾರತದ ಸವಾಲು ಅಂತ್ಯವಾಗಿದೆ. ಪುರುಷರ ಸಿಂಗಲ್ಸ್‌ನ 2ನೇ ಸುತ್ತಿನಲ್ಲಿ ಶ್ರೀಕಾಂತ್, ಭಾರತದವರೇ ಆದ ಎಚ್.ಎಸ್.ಪ್ರಣಯ್ ವಿರುದ್ಧ 18-21, 30-29, 21-18 ಗೇಮ್‌ಗಳಲ್ಲಿ ಗೆಲುವು ಪಡೆದರು.
ಚೀನಾದ ಲಿನ್ ಡಾನ್ ಗಾಯದ ಸಮಸ್ಯೆಯಿಂದಾಗಿ ಹಿಂದೆ ಸರಿದ ಕಾರಣ ಸಮೀರ್ ವರ್ಮಾ ಕ್ವಾರ್ಟರ್ ಗೇರಿದರು. ಡಬಲ್ಸ್ ವಿಭಾಗದಲ್ಲೂ ಭಾರತದ ಸವಾಲು ಅಂತ್ಯಗೊಂಡಿದೆ.