ಬಿಗ್ ಬ್ಯಾಶ್ ಲೀಗ್‌ನಲ್ಲಿ ಅಭಿಮಾನಿಗಳ ಮಾರಾಮಾರಿ!

Published : Jan 13, 2019, 10:58 AM IST
ಬಿಗ್ ಬ್ಯಾಶ್ ಲೀಗ್‌ನಲ್ಲಿ ಅಭಿಮಾನಿಗಳ ಮಾರಾಮಾರಿ!

ಸಾರಾಂಶ

ಬಿಗ್‌ಬ್ಯಾಶ್ ಲೀಗ್ ಟೂರ್ನಿಯಲ್ಲಿ ಅಭಿಮಾನಿಗಳಿಬ್ಬರು ಹೊಡೆದಾಡಿಕೊಂಡ ಘಟನೆ ನಡೆದಿದೆ. ಅಷ್ಟಕಕ್ಕೂ ಈ ಮಾರಾಮಾರಿ ನಡೆದಿದ್ದು ಹೇಗೆ? ಇಬ್ಬರ ಜಗಳ ಅಂತ್ಯವಾಗಿದ್ದು ಹೇಗೆ? ಇಲ್ಲಿದೆ ವಿಡೀಯೋ.  

ಮೆಲ್ಬರ್ನ್(ಜ.13): ಆಸ್ಟ್ರೇಲಿಯಾ ಬಿಗ್ ಬ್ಯಾಶ್ ಲೀಗ್ ಟೂರ್ನಿ ರೋಚಕ ಘಟ್ಟ ತಲುಪಿದೆ. ಆಡಿಲೇಡ್ ಸ್ಟ್ರೈಕರ್ಸ್ ಹಾಗೂ ಮೆಲ್ಬರ್ನ್ ಸ್ಟಾರ್ಸ್ ನಡುವಿನ ಹೋರಾಟ ಭಾರಿ ಕುತೂಹಲ ಮೂಡಿಸಿತ್ತು. ರೋಚಕ ಪಂದ್ಯದಲ್ಲಿ ಆಡಿಲೇಡ್ 41 ರನ್‌ಗಳ ಗೆಲುವು ಸಾಧಿಸಿತು. ಮೈದಾನದಲ್ಲಿ ಕ್ರಿಕೆಟಿಗರು ಹೋರಾಟ ಮಾಡಿದರೆ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಮಾರಾಮಾರಿ ನಡೆಸಿದ್ದಾರೆ.

ಇದನ್ನೂ ಓದಿ: ಣಜಿ ಟ್ರೋಫಿ ಕ್ವಾರ್ಟರ್ ಫೈನಲ್: ರಾಜಸ್ಥಾನ ವಿರುದ್ಧ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ

ಪಂದ್ಯ ಅಂತಿಮ ಘಟ್ಟ ತಲುಪುತ್ತಿದ್ದಂತೆ ಇತ್ತ ಅಭಿಮಾನಿಗಳು ಹೊಡೆದಾಟ ಶುರು ಮಾಡಿದ್ದಾರೆ. ರೊಚ್ಚಿಗೆದ್ದ ಅಭಿಮಾನಿ ಮತ್ತೊಬ್ಬ ಅಭಿಮಾನಿಯನ್ನ ಥಳಿಸಿದ್ದಾನೆ. ಮಾತಿನಿಂದ ಶುರುವಾದ ಜಗಳ ತಾರಕಕ್ಕೇರಿದೆ. ಇಬ್ಬರ ಮಾರಾಮಾರಿಯಿಂದ ಕ್ರೀಡಾಂಗಣದ ಭದ್ರತಾ ಸಿಬ್ಬಂಧಿ ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ವಶಕ್ಕೆ ಪಡೆದರು.

 

 

ಇದನ್ನೂ ಓದಿ: 87 ವರ್ಷದ ಅಭಿಮಾನಿ ಆಸೆ ಈಡೇರಿಸಿದ ಧೋನಿ

ಅಭಿಮಾನಿಗಳ ಹೊಡೆದಾಟದ ಕುರಿತು ಸೌತ್ ಆಸ್ಟ್ರೇಲಿಯಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ಹಾಗೂ ಇತರ ವೀಡಿಯೋ ಪರಿಶೀಲಿಸಿರುವ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಇದೀಗ ಆಸ್ಟ್ರೇಲಿಯಾ ಲೀಗ್ ಕ್ರಿಕೆಟ್ ಪಂದ್ಯದ ವೇಳೆ ಮಾರಾಮಾರಿ ನಡೆಸಿರೋದು ದುರದೃಷ್ಟಕರ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ