
ವಡೋದರ(ಜ.21): ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಡೋದರ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಜಾಕೊಬ್ ಮಾರ್ಟಿನ್ ನೆರವಿಗೆ ಇದೀಗ ಬಿಸಿಸಿಐ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಧಾವಿಸಿದ್ದಾರೆ. ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.
ಇದನ್ನೂ ಓದಿ: ಕೊಹ್ಲಿ ಪಡೆ ಸೇರಲು ಮತ್ತೊಬ್ಬ ದ್ರಾವಿಡ್ ಶಿಷ್ಯ ರೆಡಿ
ಡಿಸೆಂಬರ್ 28 ರಂದು ನಡೆದ ರಸ್ತೆ ಅಪಘಾತದಲ್ಲಿ ಜಾಕೊಬ್ ಮಾರ್ಟಿನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಾರ್ಟಿನ್ ಪತ್ನಿ ಆರ್ಥಿಕ ನೆರವು ಕೋರಿ ಬಿಸಿಸಿಐಗೆ ಮನವಿ ಮಾಡಿದ್ದರು. ತಕ್ಷಣವೇ ಬಿಸಿಸಿಐ 5 ಲಕ್ಷ ರೂಪಾಯಿ ಬಿಡುಗಡೆ ಮಾಡಿದೆ. ಇನ್ನು ಬರೋಡಾ ಕ್ರಿಕೆಟ್ ಸಂಸ್ಥೆ 3 ಲಕ್ಷ ರೂಪಾಯಿ ನೀಡಿದೆ.
ಸೌರವ್ ಗಂಗೂಲಿ ಕೂಡ ಆರ್ಥಿಕ ಸಹಾಯ ಮಾಡಿದ್ದಾರೆ. ಇದರ ಜೊತೆಗೆ ಮಾಜಿ ವೇಗಿ ಜಹೀರ್ ಖಾನ್, ಇರ್ಫಾನ್ ಪಠಾಣ್, ಯುಸೂಫ್ ಪಠಾಣ್, ಮುನಾಫ್ ಪಟೇಲ್, ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಸೇರಿದಂತೆ ಕ್ರಿಕೆಟ್ ದಿಗ್ಗಜರು ನೆರವು ನೀಡಿದ್ದಾರೆ. ಇಷ್ಟೇ ಅಲ್ಲ ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ: 2 ವರ್ಷ ಶಾಲೆಗೇ ಹೋಗದವ ಗ್ರ್ಯಾಂಡ್‌ಮಾಸ್ಟರ್!
ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ಮಾರ್ಟಿನ್, 10 ಏಕದಿನ ಪಂದ್ಯ ಆಡಿದ್ದಾರೆ. 5 ಪಂದ್ಯ ಗಂಗೂಲಿ ನಾಯಕತ್ವದಲ್ಲಿ ಆಡಿದ್ದರೆ, ಇನ್ನುಳಿದ 5 ಪಂದ್ಯವನ್ನ ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಆಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.