
ನವದೆಹಲಿ(ಮೇ.14) : ಶ್ರೀಲಂಕಾ ‘ಎ’ ವಿರುದ್ಧ 4 ದಿನಗಳ ಪಂದ್ಯಗಳ ಸರಣಿಗೆ ಭಾರತ ತಂಡ ಪ್ರಕಟಗೊಂಡಿದ್ದು, ಕರ್ನಾಟಕದ ಶ್ರೇಯಸ್ ಗೋಪಾಲ್ ಆಯ್ಕೆಯಾಗಿದ್ದಾರೆ. ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ಪಂದ್ಯಗಳು ನಡೆಯಲಿವೆ. ತಂಡವನ್ನು ಇಶಾನ್ ಕಿಶನ್ ಮುನ್ನಡೆಸಲಿದ್ದಾರೆ. ಇದೇ ವೇಳೆ 5 ಪಂದ್ಯಗಳ ಏಕದಿನ ಸರಣಿಗೂ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಯಾವೊಬ್ಬರಿಗೂ ಸ್ಥಾನ ಸಿಕ್ಕಿಲ್ಲ.
ಇದನ್ನೂ ಓದಿ: ಧೋನಿ ವಿರುದ್ಧ ತಿರುಗಿ ಬಿದ್ರಾ ಕುಲ್ದೀಪ್ ಯಾದವ್?
ಜುಲೈನಲ್ಲಿ ಭಾರತ ‘ಎ’ ವಿಂಡೀಸ್ ಪ್ರವಾಸ ಕೈಗೊಳ್ಳಲಿದ್ದು, 5 ಏಕದಿನ , 3 ಟೆಸ್ಟ್ ಆಡಲಿದೆ. ಏಕದಿನ ತಂಡವನ್ನು ರಾಜ್ಯದ ಮನೀಶ್ ಪಾಂಡೆ ಮುನ್ನಡೆಸಲಿದ್ದು, ಮಯಾಂಕ್ ಅಗರ್‌ವಾಲ್ ಸ್ಥಾನ ಪಡೆದಿದ್ದಾರೆ. ಟೆಸ್ಟ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ರಾಜ್ಯದ ಕೆ.ಗೌತಮ್ ಸ್ಥಾನ ಪಡೆದಿದ್ದಾರೆ. ಮಯಾಂಕ್ 3ನೇ ಪಂದ್ಯಕ್ಕೆ ಮಾತ್ರ ಆಯ್ಕೆಯಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.