
ಕೋಲ್ಕತಾ(ಮಾ.18): ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮದ್ ಶಮಿ ಅವರ ಪತ್ನಿ ಹಸೀನ್ ಜಹಾನ್ ಜತೆ ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ದಳದ ನಾಲ್ವರು ಅಧಿಕಾರಿಗಳು ಶನಿವಾರ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಮ್ಮ ಪತಿ ಮ್ಯಾಚ್ ಫಿಕ್ಸಿಂಗ್ ಮಾಡಿದ್ದಾರೆ. ಮೊಹಮದ್ ಭಾಯ್ ಎಂಬುವರು ನೀಡಿದ್ದ ಹಣವನ್ನು ದುಬೈನಲ್ಲಿ ಪಾಕ್ ಮೂಲದ ಅಲ್ಬಿಶಾ ಎಂಬ ಯುವತಿಯಿಂದ ಶಮಿ ಪಡೆದಿದ್ದರು ಎಂದು ಜಹಾನ್ ದೂರಿದ್ದರು.
ಪತ್ನಿಯಿಂದಲೇ ಶಮಿ ವಿರುದ್ಧ ಮ್ಯಾಚ್‌ಫಿಕ್ಸಿಂಗ್ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನೇಮಿತ ಬಿಸಿಸಿಐ ಆಡಳಿತ ಸಮಿತಿ ಶಮಿ ವಿರುದ್ಧ ತನಿಖೆಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಕೋಲ್ಕತಾದ ಲಾಲ್ ಬಜಾರ್ ಠಾಣೆಯಲ್ಲಿ ಬಿಸಿಸಿಐ ಅಧಿಕಾರಿಗಳು ಶಮಿ ಅವರಿಂದ ಮಾಹಿತಿ ಪಡೆದಿದ್ದರೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.