ಕನ್ನಡಿಗ ಕರುಣ್ ನಾಯರ್‌ಗೆ ಮತ್ತೊಂದು ಶಾಕ್!

Published : Oct 07, 2018, 12:21 PM IST
ಕನ್ನಡಿಗ ಕರುಣ್ ನಾಯರ್‌ಗೆ ಮತ್ತೊಂದು ಶಾಕ್!

ಸಾರಾಂಶ

ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಅವಕಾಶಕ್ಕಾಗಿ ಬೆಂಚ್ ಕಾದುಕುಳಿತಿದ್ದ ಕನ್ನಡಿಗ ಕರುಣ್ ನಾಯರ್‌‌ನ್ನ, ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರುಣ್‌ಗೆ ಮತ್ತೊಂದು ಆಘಾತ ಎದುರಾಗಿದೆ. 

ನವದೆಹಲಿ( ಅ.07): ವೆಸ್ಟ್ಇಂಡೀಸ್ ವಿರುದ್ದದ ಟೆಸ್ಟ್ ಸರಣಿಯಿಂದ ಕೈಬಿಟ್ಟ ಬೆನ್ನಲ್ಲೇ ಕನ್ನಡಿಗ ಕರುಣ್ ನಾಯರ್ ಹಾಗೂ ತಮಿಳುನಾಡು ಬ್ಯಾಟ್ಸ್‌ಮನ್ ಮುರಳಿ ವಿಜಯ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಈ ಇಬ್ಬರು ಆಟಗಾರರು ಇದೀಗ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬಿಸಿಸಿಐನ ಕೇಂದ್ರ ಗುತ್ತಿಗೆ ನಿಯಮಾವಳಿ ಉಲ್ಲಂಘಿಸಿ ಆಯ್ಕೆ ಸಮಿತಿ ವಿರುದ್ಧ ಹೇಳಿಕೆ ನೀಡಿದ್ದ ಆಟಗಾರರಾದ ರಾಜ್ಯದ ಕರುಣ್ ನಾಯರ್ ಮತ್ತು ಮುರಳಿ ವಿಜಯ್‌ಗೆ ಸಂಕಟ ಎದುರಾಗಿದೆ. ಇಬ್ಬರೂ ಆಟಗಾರರಿಂದ ಬಿಸಿಸಿಐ ವಿವರಣೆ ಕೇಳಿದೆ.

ಕರುಣ್ ಮತ್ತು ವಿಜಯ್, ‘ಟೆಸ್ಟ್ ತಂಡದಿಂದ ಕೈಬಿಟ್ಟಿರುವುದಕ್ಕೆ ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಈವರೆಗೂ ನಮ್ಮನ್ನು ಸಂಪರ್ಕಿಸಿಲ್ಲ. ಕಾರಣವನ್ನೂ ತಿಳಿಸಿಲ್ಲ’ ಎಂದು ಹೇಳಿಕೆ ನೀಡಿದ್ದರು.  ಇದು ಬಿಸಿಸಿಐನ ಸಂವಹನ ನೀತಿಯ ಉಲ್ಲಂಘನೆಯಾಗಿದ್ದು, ಈ ಸಂಬಂಧ ಇಬ್ಬರಿಂದಲೂ ವಿವರಣೆ ಕೇಳಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ಕಿಲೋಮೀಟರ್ ಸೈಕಲ್‌ನಲ್ಲಿ ಸ್ಟೇಡಿಯಂಗೆ ಬರುತ್ತಿದ್ದ ಆಟಗಾರನಿಗೆ ಸಿಕ್ತು 14 ಕೋಟಿ ನಗದು! ಇದು ಐಪಿಎಲ್ ಜಾದೂ
ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!