
ಮುಂಬೈ(ಆ.11): ಕಳೆದ ಕೆಲ ವರ್ಷಗಳಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು ಹಲವು ಕ್ಷೇತ್ರಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ. ರಾಹುಲ್ ದ್ರಾವಿಡ್ ಕೋಚ್ ಆಗಿದ್ದರೆ, ಸಚಿನ್ ತೆಂಡೂಲ್ಕರ್ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವಿರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್ ವೀಕ್ಷಕ ವಿವರಣೆಗಾಗರಾಗಿ ತೊಡಗಿಸಿಕೊಂಡಿದ್ದಾರೆ.
ಮಾಜಿ ನಾಯಕ ಸೌರವ್ ಗಂಗೂಲಿ ಬಂಗಳಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ದಕ್ಷ ಆಡಳಿತ ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೋಲ್ಕತ್ತಾ ಪ್ರಿನ್ಸ್ ಗಂಗೂಲಿ ಮುಂದಿನ ಬಿಸಿಸಿಐ ಅಧ್ಯಕ್ಷ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.
ಸುಪ್ರೀಂ ಕೋರ್ಟ್ ಲೋಧ ಶಿಫಾರಸುಗಳನ್ನ ಸಡಿಲಗೊಳಿದ ಬೆನ್ನಲ್ಲೇ, ಇದೀಗ ಸೌರವ್ ಗಂಗೂಲಿ ಮುಂದಿನ ಬಿಸಿಸಿಐ ಅಧ್ಯಕ್ಷ ಸ್ಥಾನ ಅಲಂಕರಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಬಹಿರಂಗ ಪಡಿಸಿದೆ.
ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಅತ್ಯುತ್ತಮ ಆಡಳಿತ ನೀಡಿರುವ ಗಂಗೂಲಿ, ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಅನ್ನೋ ಅಭಿಪ್ರಾಯವಿದೆ. ಸದ್ಯ ಹಂಗಾಮಿ ಅಧ್ಯಕ್ಷರಾಗಿ ಸಿಕೆ ಖನ್ನ ಅಧಿಕಾರ ನಿರ್ವಹಿಸುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.