
ಕರಾಚಿ(ಮಾ.02): ಬಿಸಿಸಿಐ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಿತ್ತಾಟ ಮುಂದುವರಿದಿದೆ. ಏಪ್ರಿಲ್'ನಲ್ಲಿ ಪಾಕಿಸ್ತಾನದಲ್ಲಿ ನಡೆಯಬೇಕಿರುವ ಏಷ್ಯಾ ಉದಯೋನ್ಮುಖ ರಾಷ್ಟ್ರಗಳ ಕಪ್ ಕ್ರಿಕೆಟ್ ಪಂದ್ಯಾವಳಿಗೆ ತಂಡ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಪಂದ್ಯಾವಳಿ ಪಾಕಿಸ್ತಾನದಿಂದ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.
ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧಿಕಾರಿ ‘ಬಿಸಿಸಿಐ ಭಾರತ ತಂಡವನ್ನು ಕಳುಹಿಸುವುದಿಲ್ಲ ಎಂದು ತಿಳಿಸಿದ್ದರಿಂದ ಪಂದ್ಯಾವಳಿ ಶ್ರೀಲಂಕಾ ಇಲ್ಲವೇ ಬಾಂಗ್ಲಾದೇಶಕ್ಕೆ ಸ್ಥಳಾಂತರಗೊಳ್ಳಲಿದೆ’ ಎಂದಿದ್ದಾರೆ. ‘ಎಲ್ಲಾ ರಾಷ್ಟ್ರಗಳು ಪಾಲ್ಗೊಳ್ಳಲಿವೆ ಎಂದು ಖಚಿತಪಡಿಸಿದ ಬಳಿಕವಷ್ಟೇ ಪಂದ್ಯಾವಳಿ ಆಯೋಜಿಸಲು ನಾವು ಒಪ್ಪಿಕೊಂಡಿದ್ದೆವು’ ಎಂದು ಪಿಸಿಬಿ ಅಧಿಕಾರಿ ಹೇಳಿದ್ದಾರೆ.
ಏಷ್ಯಾ ಕ್ರಿಕೆಟ್ ಮಂಡಳಿ ಮುಖ್ಯಸ್ಥರೂ ಆಗಿರುವ ಪಿಸಿಬಿ ಅಧ್ಯಕ್ಷ ನಜಂ ಸೇಠಿ, ‘ಸದ್ಯದಲ್ಲೇ ಕೊಲಂಬೊದಲ್ಲಿ ಸಭೆ ನಡೆಸಲಿದ್ದು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸೆಪ್ಟೆಂಬರ್'ನಲ್ಲಿ ಭಾರತದಲ್ಲಿ ನಡೆಯಲಿರುವ ಏಷ್ಯಾಕಪ್'ನಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆ ಬಗ್ಗೆಯೂ ಪುನರ್ ಚಿಂತನೆ ನಡೆಸಲಾಗುತ್ತದೆ’ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.