
ನವದೆಹಲಿ(ಅ.17): ಎಂ.ವಿ.ಶ್ರೀಧರ್ ರಾಜೀನಾಮೆ ಬಳಿಕ ತೆರವುಗೊಂಡಿರುವ ಕ್ರಿಕೆಟ್ ವ್ಯವಹಾರಗಳ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಬಿಸಿಸಿಐ ಹೊಸದಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರು ಕ್ರಿಕೆಟ್ ತಜ್ಞ ಇಲ್ಲವೇ ಉನ್ನತ ಮಟ್ಟದಲ್ಲಿ ಕ್ರಿಕೆಟ್ ಆಡಿದವರಾಗಬೇಕಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23 ಕೊನೆ ದಿನಾಂಕವಾಗಿದೆ.
ತಮ್ಮ ತವರು ಕ್ರಿಕೆಟ್ ಸಂಸ್ಥೆ ಹೈದರಾಬಾದ್'ನಲ್ಲಿ ಹಣಕಾಸು ಅವ್ಯವಹಾರದ ಆರೋಪ ಎದುರಾದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಶ್ರೀಧರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.