ವಿಶ್ವಕಪ್ 2019: ಏ.15ಕ್ಕೆ ಟೀಂ ಇಂಡಿಯಾ ಪ್ರಕಟ!

Published : Apr 08, 2019, 02:18 PM IST
ವಿಶ್ವಕಪ್ 2019: ಏ.15ಕ್ಕೆ ಟೀಂ ಇಂಡಿಯಾ ಪ್ರಕಟ!

ಸಾರಾಂಶ

ಮೇ.30 ರಿಂದ ಪ್ರತಿಷ್ಠಿತ 2019ರ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಆಯ್ಕೆ ಮಾಡಲು ಬಿಸಿಸಿ ಮುಂದಾಗಿದೆ. ಐಪಿಎಲ್ ಟೂರ್ನಿ ನಡುವೆಯೆ ತಂಡ ಆಯ್ಕೆ ಮಾಡಿ ಐಸಿಸಿಗೆ ಪಟ್ಟಿ ಕಳುಹಿಸಲಿದೆ.

ಮುಂಬೈ(ಏ.08): 2019ರ ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್, ಆಫ್ಘಾನಿಸ್ತಾನ ತಂಡ ಪ್ರಕಟಿಸಿದೆ. ಇನ್ನುಳಿದ ರಾಷ್ಟ್ರಗಳು ಶೀಘ್ರದಲ್ಲೇ ತಂಡ ಪ್ರಕಟಿಸಲಿದೆ. ಇದೀಗ ಬಿಸಿಸಿಐ ಏ.15ಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಲಿದೆ. ಏ.23ರ ಒಳಗೆ ಐಸಿಸಿಗೆ 15 ಸದಸ್ಯರ ತಂಡದ ಪಟ್ಟಿ ನೀಡಬೇಕು. ಸದ್ಯ ಐಪಿಎಲ್‌ ಟೂರ್ನಿ ನಡುವೆಯೇ ತಂಡ ಪ್ರಕಟಿಸಲು ಐಸಿಸಿಐ  ಮುಂದಾಗಿದೆ.

ಇದನ್ನೂ ಓದಿ: ವಿಶ್ವಕಪ್ 2019: ಇಲ್ಲಿದೆ ಟೀಂ ಇಂಡಿಯಾ 15 ಸದಸ್ಯರ ಸಂಭಾವ್ಯ ತಂಡ!

ಟೀಂ ಇಂಡಿಯಾದ ವಿಶ್ವಕಪ್ ತಂಡ ಬಹುತೇಕ ಅಂತಿಮಗೊಂಡಿದೆ. ಆದರೆ ನಾಲ್ಕನೇ ಕ್ರಮಾಂಕಕ್ಕೆ ಯಾರನ್ನು ಆಯ್ಕೆ ಮಾಡಬೇಕು ಅನ್ನೋ ಗೊಂದಲ ಆಯ್ಕೆ ಸಮಿತಿಯಲ್ಲಿತ್ತು. ಹೀಗಾಗಿ  ತಂಡದ  ಆಯ್ಕೆ ವಿಳಂಭವಾಗಿತ್ತು. ಇದೀಗ ಏ.15ರಂದು ಎಂ.ಎಸ್.ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಅಂತಿಮ ಆಯ್ಕೆ ನಡೆಸಲಿದೆ.

ಇದನ್ನೂ ಓದಿ: RCB ಸತತ ಸೋಲು- ಟೀಂ ಇಂಡಿಯಾಕ್ಕೆ ಸೈಡ್ ಎಫೆಕ್ಟ್?

ಅಂಬಾಟಿ ರಾಯುಡು, ರಿಷಬ್ ಪಂತ್ ಹಾಗೂ ವಿಜಯ್ ಶಂಕರ್ ನಡುವೆ ನಾಲ್ಕನೇ ಕ್ರಮಾಂಕಕ್ಕೆ ಪೈಪೋಟಿ ಎರ್ಪಟ್ಟಿದೆ. ಈ ಬಾರಿಯ ವಿಶ್ವಕಪ್ ತಂಡದಲ್ಲಿ ಕನ್ನಡಿಗರಿಗೆ ಅವಕಾಶ ಸಿಗುತ್ತಾ ಅನ್ನೋ ಕುತೂಹಲ ಕರ್ನಾಟಕದಲ್ಲಿ ಮನೆ ಮಾಡಿದೆ. ಮೇ.30 ರಿಂದ 2019ರ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?