2019ರ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಕ್ರಿಕೆಟಿಗರ ಪಟ್ಟಿ ಬಹುತೇಕ ಅಂತಿಮಗೊಂಡಿದೆ. ಆಯ್ಕೆ ಸಮಿತಿ 18 ಕ್ರಿಕೆಟಿಗರ ಪಟ್ಟಿ ರೆಡಿ ಮಾಡಿ, ಬಿಸಿಸಿಐಗೆ ಕಳುಹಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ಮುಂಬೈ(ಫೆ.15): ಪ್ರತಿಷ್ಠಿತ ವಿಶ್ವಕಪ್ ಟೂರ್ನಿಗೆ ಬಿಸಿಸಿಐ ತಯಾರಿ ಆರಂಭಿಸಿದೆ. ಮೊದಲ ಹಂತವಾಗಿ ಆಯ್ಕೆ ಸಮಿತಿ ಟೀಂ ಇಂಡಿಯಾದ 18 ಕ್ರಿಕೆಟಿಗರ ಪಟ್ಟಿಯನ್ನ ರೆಡಿ ಮಾಡಿದೆ. ಇಷ್ಟೇ ಅಲ್ಲ ಈ ಕ್ರಿಕೆಟಿಗರ ಐಪಿಎಲ್ ತಂಡದ ಫ್ರಾಂಚೈಸಿ ಮಾಲೀಕರ ಜೊತೆ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದೆ.
ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಟಿ20, ಏಕದಿನ ಸರಣಿ ವೇಳಾಪಟ್ಟಿ ಇಲ್ಲಿದೆ!
2019ರ ವಿಶ್ವಕಪ್ ಟೂರ್ನಿಗೆ 18 ಕ್ರಿಕೆಟಿಗರ ಪಟ್ಟಿಯನ್ನ ಸಿದ್ಧಪಡಿಸಲಾಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ.ಪ್ರಸಾದ್ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಯ್ಕೆ ಮಾಡಿದ ಪ್ರಸಾದ್, ಬಳಿಕ ವಿಶ್ವಕಪ್ ತಯಾರಿ ಕುರಿತು ಮಾತನಾಡಿದರು.
ಇದನ್ನೂ ಓದಿ: ಭಾರತ-ಪಾಕಿಸ್ತಾನ ವಿಶ್ವಕಪ್ ಹೋರಾಟ- ಯಾರು ಮರೆಯಲ್ಲ ಬದ್ಧವೈರಿಗಳ ಕದನ!
ವಿಶ್ವಕಪ್ ಟೂರ್ನಿಗೂ ಮುನ್ನ ಐಪಿಎಲ್ ಟೂರ್ನಿ ಇರೋದರಿಂದ ವಿಶ್ವಕಪ್ ಆಡೋ ಪ್ರಮುಖ ಆಟಗಾರರ ಮೇಲಿನ ಒತ್ತಡ ಕಡಿಮೆ ಮಾಡಿ, ವಿಶ್ರಾಂತಿ ನೀಡಲು ಬಿಸಿಸಿಐ ಈಗಾಗಲೇ ಐಪಿಎಲ್ ಫ್ರಾಂಚೈಸಿ ಜೊತೆ ಮಾತುಕತೆ ನಡೆಸಿದೆ. ವಿಶ್ವಕಪ್ ದೃಷ್ಟಿಯಿಂದ ಆಟಗಾರರಿಗೆ ವಿಶ್ರಾಂತಿ ಅಗತ್ಯ ಎಂದು ಪ್ರಸಾದ್ ಹೇಳಿದ್ದಾರೆ. ಆದರೆ 18 ಆಟಗಾರರ ಪಟ್ಟಿಯಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಅನ್ನೋದನ್ನ ಬಹಿರಂಗ ಪಡಿಸಿಲ್ಲ.