
ಕರಾಚಿ(ನ.19): ಏಷ್ಯನ್ ಕ್ರಿಕೆಟ್ ಸಮಿತಿ(ಎಸಿಸಿ), ಶನಿವಾರ ಲಾಹೋರ್‌ನಲ್ಲಿ ಆಯೋಜಿಸಿದ್ದ ವಾರ್ಷಿಕ ಸಾಮಾನ್ಯ ಸಭೆಗೆ ಬಿಸಿಸಿಐ, ಭದ್ರತೆ ಹಾಗೂ ರಾಜತಾಂತ್ರಿಕ
ಸಮಸ್ಯೆಯ ಕಾರಣ ಒಡ್ಡಿ ತನ್ನ ಪ್ರತಿನಿಧಿಯನ್ನು ಕಳುಹಿಸರಲಿಲ್ಲ. ಇದೇ ಸಭೆಯಲ್ಲಿ ಎಸಿಸಿಯ ನೂತನ ಅಧ್ಯಕ್ಷರಾಗಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ)
ಮುಖ್ಯಸ್ಥ ನಜ್ಮುಲ್ ಹಸನ್, 2 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದಾರೆ.
‘ರಾಜತಾಂತ್ರಿಕ ಸಮಸ್ಯೆಗಳಿಂದ ಎಸಿಸಿ ಸಭೆ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ, ಪಿಸಿಬಿ ಮೊದಲೇ ತಿಳಿಸಿತ್ತು’ ಎಂದು ಪಿಸಿಬಿ ಮೂಲಗಳು ತಿಳಿಸಿವೆ. ಬಿಸಿಸಿಐ ಎಸಿಸಿ ಸಭೆಯಲ್ಲಿ ಭಾರತವೊಂದನ್ನು ಬಿಟ್ಟು ಉಳಿದ ಎಲ್ಲ 33 ದೇಶಗಳ ಪ್ರತಿನಿಧಿಗಳು ಹಾಗೂ ಐಸಿಸಿಯ ಸಿಇಒ ಡೇವಿಡ್ ರಿಚರ್ಡ್ಸ್‌ನ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.
ಬಿಸಿಸಿಐ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಾನೂನು ಹೋರಾಟ ನಡೆಸುತ್ತಿದೆ. ಒಪ್ಪಂದದ ಪ್ರಕಾರ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಆಯೋಜನೆ ಮಾಡಲು ಬಿಸಿಸಿಐ ಮುಂದಾಗುತ್ತಿಲ್ಲ. ಹೀಗಾಗಿ ನಷ್ಟ ಭರಿಸಿಕೊಡಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿ ಮೆಟ್ಟಿಲೇರಿದೆ. ಈ ಕಾರಣದಿಂದ ಬಿಸಿಸಿಐ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಗೆ ಗೈರಾಗಿದೆ ಅನ್ನೋ ಮಾತುಗಳು ಕೇಳಿಬಂದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.