
ಬೆಂಗಳೂರು[ಅ.11]: ಶುಕ್ರವಾರದಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ 12 ಆಟಗಾರನ್ನೊಳಗೊಂಡ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಪ್ರತಿಭಾನ್ವಿತ ಕನ್ನಡಿಗ ಮಯಾಂಕ್ ಅಗರ್’ವಾಲ್ ಮತ್ತೊಮ್ಮೆ ನಿರಾಸೆ ಎದುರಾಗಿದೆ.
ಹೈದರಾಬಾದ್’ನಲ್ಲಿ ನಾಳೆಯಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬಹುತೇಕ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವೇ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಬೆಂಚ್ ಕಾಯಿಸಿದ್ದ ಅಗರ್’ವಾಲ್’ಗೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಗರ್’ವಾಲ್ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಇನ್ನಷ್ಟು ಸಮಯ ಕಾಯಬೇಕಿದೆ.
ರಾಜ್’ಕೋಟ್’ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡವು ಇನ್ನಿಂಗ್ಸ್ ಹಾಗೂ 272 ರನ್’ಗಳ ಭರ್ಜರಿ ಜಯ ದಾಖಲಿಸಿತ್ತು. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಈಗಾಗಲೇ 1-0 ಮುನ್ನಡೆ ಸಾಧಿಸಿದೆ.
ಟೀಂ ಇಂಡಿಯಾ ಪಟ್ಟಿ ಹೀಗಿದೆ..
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.