ಎಂ.ಎಸ್.ಕೆ ಪ್ರಸಾದ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿಶ್ವಕಪ್ ಟೂರ್ನಿಗೆ ಸಾಕಷ್ಟು ಅಳೆದು-ತೂಗಿ ತಂಡವನ್ನು ಪ್ರಕಟಿಸಲಾಗಿದ್ದು, ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಬಹುನಿರೀಕ್ಷಿತ 12ನೇ ಏಕದಿನ ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಕನ್ನಡಿಗ ಕೆ.ಎಲ್ ರಾಹುಲ್ ಇಂಗ್ಲೆಂಡ್ ಟೂರ್’ಗೆ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ
ಎಂ.ಎಸ್.ಕೆ ಪ್ರಸಾದ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿಶ್ವಕಪ್ ಟೂರ್ನಿಗೆ ಸಾಕಷ್ಟು ಅಳೆದು-ತೂಗಿ ತಂಡವನ್ನು ಪ್ರಕಟಿಸಲಾಗಿದೆ. 2011ರ ವಿಶ್ವಕಪ್ ಚಾಂಪಿಯನ್ ಟೀಂ ಇಂಡಿಯಾ ಮತ್ತೊಮ್ಮೆ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.
India’s squad for the ICC announced: Virat Kohli (Capt), Rohit Sharma (vc), Shikhar Dhawan, KL Rahul, Vijay Shankar, MSD (wk), Kedar Jadhav, Dinesh Karthik, Yuzvendra Chahal, Kuldeep Yadav, Bhuvneshwar Kumar, Jasprit Bumrah, Hardik Pandya, Ravindra Jadeja, Mohd Shami
— BCCI (@BCCI)
undefined
ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿರುವ ಟೀಂ ಇಂಡಿಯಾ ತಂಡದಲ್ಲಿ ಅನುಭವಿ ಹಾಗೂ ಯುವ ಆಟಗಾರರನ್ನೊಳಗೊಂಡ ಸಮತೋಲಿತ ತಂಡವನ್ನು ಪ್ರಕಟಿಸಲಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಮೀಸಲು ವಿಕೆಟ್’ಕೀಪರ್ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಆಯ್ಕೆಯಾಗಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕಕ್ಕೆ ವಿಜಯ್ ಶಂಕರ್ ಆಯ್ಕೆಯಾಗಿದ್ದಾರೆ.
1983ರಲ್ಲಿ ಕಪಿಲ್ ದೇವ್ ಹಾಗೂ 2011ರಲ್ಲಿ ಎಂ.ಎಸ್ ಧೋನಿ ನೇತೃತ್ವದಲ್ಲಿ ಭಾರತ ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಇನ್ನು ಪಾಕಿಸ್ತಾನ ವಿರುದ್ಧ ಜೂನ್ 16ರಂದು ಭಾರತ ಕಾದಾಡಲಿದೆ.